ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರ ಹುದ್ದೆ ಭರ್ತಿಗೆ ಒಪ್ಪಿಗೆ ಸೂಚಿಸಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಆಗ್ರಹಿಸಿ ಇತ್ತೀಚಿಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಭಾರಿ ಪ್ರತಿಭಟನೆಗೆ ಮಣಿದ ಸಿದ್ದರಾಮಯ್ಯ ಸರ್ಕಾರ ಗುರುವಾರ ನೇಮಕಾತಿ ಸಂಬಂಧ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56 ಸಾವಿರ ಹುದ್ದೆ ಭರ್ತಿಗೆ ಒಪ್ಪಿಗೆ ಸೂಚಿಸಲಾಗಿದೆ.
ಸಂಪುಟ ಸಭೆಯಲ್ಲಿ ನೇಮಕಾತಿಗೆ ಇರೋ ಸಾಧಕ ಭಾಧಕಗಳ ಬಗ್ಗೆ ಚರ್ಚಿಸಿದ್ದು, ಅಂತಿಮವಾಗಿ ಮೀಸಲಾತಿ ಮಿತಿ ಶೇ.50 ಮೀರದಂತೆ ಒಳಮೀಸಲಾತಿಯೊಂದಿಗೆ ನೇಮಕಾತಿ ನಡೆಸಲು ತೀರ್ಮಾನಿಸಿದೆ.
ಶೇ.56 ಮೀಸಲಾತಿ ಬದಲು ಶೇ.50ರ ಮೀಸಲಾತಿ ಅಡಿಯಲ್ಲೇ ನೇಮಕಾತಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಒಟ್ಟು 56,432 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರೋಹಿತ್ ವೇಮುಲಾ ಕಾಯ್ದೆಗೆ ಸಂಪುಟ ಅನುಮೋದನೆ
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯುವ ಸಲುವಾಗಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಈ ವಿಧೇಯಕ ಮಂಡನೆ ಮಾಡಲು ಸಂಪುಟ ಸಭೆ ನಿರ್ಣಯಿಸಿದೆ.
ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ್ದ ಸಿಎಂ, ಅಧಿವೇಶನದಲ್ಲಿ ಕಾಯ್ದೆ ಜಾರಿಗೊಳಿಸುವ ಭರವಸೆ ನೀಡಿದ್ದರು. ಅದರಂತೆ ರೋಹಿತ್ ವೇಮುಲ ಕಾಯ್ದೆ ಸಿದ್ದಪಡಿಸಿ ಸಂಪುಟ ಮುಂದೆ ಇಡಲಾಗಿತ್ತು. ಸಾಕಷ್ಟು ಚರ್ಚೆಯ ಬಳಿಕ ಇಂದು ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



