ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!
ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ.

ಯಾದಗಿರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಪತ್ರ ಬರೆದಿದಿತ್ತು. ಬಳಿಕ ಮಲ್ಲಿಕಾರ್ಜನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 26 ವರ್ಷದ ಮುತ್ಯಾ ಅಪ್ರಾಪ್ತ ಬಾಲಕಿಯನ್ನು ಹಿಡಿದುಕೊಂಡು ಆಕೆಯ ಪೋಷಕರ ಸಮ್ಮುಖದಲ್ಲಿ ಅನುಚಿತವಾಗಿ ಸ್ಪರ್ಶಿಸಿ ಚುಂಬಿಸುತ್ತಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ.
ಈ ಸಂಬಂಧ ನಿನ್ನೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಈತನ ಕ್ರಮಗಳು ಸೂಕ್ತವಲ್ಲ ಎಂದು ಆರೋಪಿಸಿರುವ ಬಾಲಕಿಯ ಪೋಷಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಮುತ್ಯಾ ಅವರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧನ ಭೀತಿಯಲ್ಲಿ ವಿಡಿಯೋ ರಿಲೀಸ್!
ಈ ಮಧ್ಯೆ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಅರೆಸ್ಟ್ ಆಗುವ ಭೀತಿಯಿಂದ ಮಲ್ಲಿಕಾರ್ಜುನ ಮುತ್ಯಾ ಪರಾರಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ನನ್ನ ಶ್ರೀಮಠದ ಭಕ್ತಾದಿಗಳೇ ಯಾವುದೇ ಆತಂಕ ಪಡಬೇಡಿ, ನಾನು ಇಲ್ಲೇ ಲೋಕಲ್ ಅಲ್ಲೇ ಇದ್ದೀನಿ, ಮಠದಲ್ಲಿ ಸಾಮೂಹಿಕ ಮದುವೆ ಇದ್ದ ಕಾರಣ ಕಾರ್ಡ್ ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಇದೇ ವಿಡಿಯೋದಲ್ಲಿ ಪ್ರಕರಣ ಬಗ್ಗೆ ಮಾತನಾಡಿರುವ ಮಲ್ಲಿಕಾರ್ಜುನ ಮುತ್ಯಾ, ಪೊಲೀಸ್ ಸಿಬ್ಬಂದಿ ಕರೆ ನೀಡಿದ್ದಾರೆಂಬುದು ಕೇಳಿದ್ದೇನೆ. ಖಂಡಿತ ಪೊಲೀಸ್ ಅಧಿಕಾರಿಗಳು ನಾನು ಯಾವಾಗ ಬಾ ಅಂತಾರೆ ಆಗ ನಾನು ಹೋಗಲು ಸಿದ್ಧನಿದ್ದೇನೆ. ಈ ವಿಷಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ, ನೀವು ಆತಂಕಪಡಬೇಡಿ ಎಂದು ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ರಿಲೀಸ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



