ಮಾರ್ಚ್ 30 ರಿಂದ ಏಪ್ರಿಲ್ 1ರವರೆಗೆ ಐತಿಹಾಸಿಕ ಬೆಂಗಳೂರು ಕರಗ!
ವಿಶ್ವವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 30ರಿಂದ ಏಪ್ರಿಲ್ 1ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ.

ಬೆಂಗಳೂರು: ವಿಶ್ವವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಮಾರ್ಚ್ 30ರಿಂದ ಏಪ್ರಿಲ್ 1ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 16ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.
ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಮಾರ್ಚ್ 24ರಂದು ಧ್ವಜಾರೋಹಣದ ಮೂಲಕ ಉತ್ಸವಕ್ಕೆ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿಕರಗ ನಡೆಯಲಿದೆ. ಬಳಿಕ ಏಪ್ರಿಲ್ 1ರ ಮಧ್ಯರಾತ್ರಿ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯಲಿದೆ. ಇನ್ನು ಒಟ್ಟು 11 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ.

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


