ರಾಜ್ಯ

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?

ಸಾಮಾನ್ಯವಾಗಿ ಮಾರ್ಚ್ ನಿಂದ ಬೇಸಿಗೆ ಪ್ರಾರಂಭವಾಗುತ್ತದೆ. ಆದರೆ, ಅದಕ್ಕೂ ಮುನ್ನಾ ಫೆಬ್ರವರಿ ಅಂತ್ಯದಲ್ಲಿಯೇ ಈ ಬಾರಿ ಬೆಂಗಳೂರಿನಲ್ಲಿ ಸುಡು ಬಿಸಿಲು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಇನ್ನೂ ಫೆಬ್ರವರಿ ತಿಂಗಳು ಅಂತ್ಯವಾಗಿಲ್ಲ. ಆದರೆ ಒಂದು ಕಾಲದಲ್ಲಿ ಉತ್ತಮ ಹವಾಮಾನಕ್ಕೆ ಹೆಸರುವಾಸಿಯಾದ ಬೆಂಗಳೂರು ನಗರದಲ್ಲಿ ಈಗಾಗಲೇ ತೀವ್ರ ಬಿಸಿಲು ಕಾಣುತ್ತಿದೆ. ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಶನಿವಾರದಿಂದ (ಫೆ 21) ನಗರದ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಸಾಮಾನ್ಯವಾಗಿ ಮಾರ್ಚ್ ನಿಂದ ಬೇಸಿಗೆ ಪ್ರಾರಂಭವಾಗುತ್ತದೆ. ಆದರೆ, ಅದಕ್ಕೂ ಮುನ್ನಾ ಫೆಬ್ರವರಿ ಅಂತ್ಯದಲ್ಲಿಯೇ ಈ ಬಾರಿ ಬೆಂಗಳೂರಿನಲ್ಲಿ ಸುಡು ಬಿಸಿಲು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಐಟಿ ರಾಜಧಾನಿಯಾಗಿ ಬದಲಾದ ನಂತರ ನಗರದಲ್ಲಿ ಕಳೆದ ಎರಡು ದಶಕಗಳಲ್ಲಿ ಫೆಬ್ರವರಿಯಲ್ಲಿ ನಗರದ ಉಷ್ಣಾಂಶದಲ್ಲಿ ಹೆಚ್ಚಳ ಕಂಡುಬಂದಿದೆ. ಅಭಿವೃದ್ಧಿಗಾಗಿ ಸಾಕಷ್ಟು ಮರಗಳನ್ನು ಕಡಿಯಲಾಗುತ್ತಿದ್ದು, ಕಾಂಕ್ರೀಟೀಕರಣ ಹೆಚ್ಚಿದೆ. ಇದರ ಪರಿಣಾಮವಾಗಿ ಆದ್ದರಿಂದ ನಗರದ ಉಷ್ಣಾಂಶದ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಫೆಬ್ರವರಿ 21 ರಂದು ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಫೆಬ್ರವರಿ 22 ರಂದು 32.4 ಡಿಗ್ರಿ, ಫೆಬ್ರವರಿ 23 ರಂದು 32.8 ಡಿಗ್ರಿ, ಫೆಬ್ರವರಿ 24 ರಂದು 31.1 ಡಿಗ್ರಿ ಮತ್ತು ಫೆಬ್ರವರಿ 25 ರಂದು ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಡೇಟಾ ಪ್ರಕಾರ ನಗರದಲ್ಲಿ 2025, 2024, 2021, 2019 ಮತ್ತು 2016 ರಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಫೆಬ್ರವರಿ 17, 2005 ರಂದು ಸಾರ್ವಕಾಲಿಕ ಗರಿಷ್ಠ 35.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಆರಂಭಿಕ ಬಿಸಿಲಿನ ಧಗೆ ಉಲ್ಲೇಖಿಸಿ, ಆರೋಗ್ಯ ತಜ್ಞರು ಬೇಸಿಗೆಯಲ್ಲಿ ಜಠರಗರುಳಿನ ಸೋಂಕಿನ ಬಗ್ಗೆ ಎಚ್ಚರಿಸಿದ್ದಾರೆ. ಬೇಸಿಗೆಯಲ್ಲಿ ಬಿಸಿಲಿನ ಬೇಗೆಯನ್ನು ಕಡಿಮೆ ಮಾಡಿಕೊಳ್ಳಲು ಹೆಚ್ಚಿನ ನೀರು ಕುಡಿಯಬೇಕು ಮತ್ತು ಮಧ್ಯಾಹ್ನ ಮತ್ತು 3 ಗಂಟೆಯ ನಡುವೆ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.