ಹಳೇ ದ್ವೇಷ: ಹೆತ್ತ ತಾಯಿ ಎದುರೇ ರೌಡಿಶೀಟರ್ ಪುತ್ರನ ಬರ್ಬರ ಹತ್ಯೆ
ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಪವನ್ ಕುಮಾರ್ (28) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ರುವ ಘಟನೆ ಥಣಿಸಂದ್ರದ ಅಮರ ಜ್ಯೋತಿ ಲೇಔಟ್ ನಲ್ಲಿ ನಡೆದಿದೆ.
ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಪವನ್ ಕುಮಾರ್ (25) ಎಂಬಾತನನ್ನು ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ತಣಿಸಂದ್ರದ ಅಮರಜ್ಯೋತಿ ಲೇಔಟ್ ನಿವಾಸಿಯಾಗಿದ್ದ ಪವನ್, ತನ್ನ ಬೇಕರಿ ಮುಚ್ಚಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ. ಈ ವೇಳೆ ಮೂರು ದ್ವಿಚಕ್ರ ವಾಹನಗಳಲ್ಲಿ ಹೆಲ್ಮೆಟ್ ಧರಿಸಿ ಆರು ಮಂದಿ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದಿದ್ದಾರೆ.
ಪವನ್ ಮನೆ ಬಳಿ ಬೈಕ್ ನಿಲ್ಲಿಸುತ್ತಿದ್ದಂತೆಯೇ ಆತನ ತಾಯಿಗಳ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹೆತ್ತ ಮಗನನ್ನು ರಕ್ಷಿಸಲು ಸಹಾಯಕ್ಕಾಗಿ ತಾಯಿ ಗೋಗರೆಯುತ್ತಿದ್ದ ದೃಶ್ಯಗಳು ಮನಕಲಕುವಂತಿದ್ದವು.
ಜೈಲಿಂದ ಬಂದಿದ್ದ ಪವನ್
ಪವನ್ ಕುಮಾರ್ ಒಟ್ಟು ಮೂರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. 2023 ರಲ್ಲಿ ನಡೆದಿದ್ದ ಕಪಿಲ್ ಎಂಬಾತನ ಕೊಲೆ ಪ್ರಕರಣವೊಂದರಲ್ಲಿ ಐದನೇ ಆರೋಪಿಯಾಗಿ ಜೈಲಿಗೆ ಹೋಗಿದ್ದ. ಕಳೆದ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದ. ಮಗ ಒಳ್ಳೆಯವನಾಗಿ ಬದಲಾಗಲಿ ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಹಿಂದೆ ಮನೆ ಸಮೀಪವೇ ಕುಟುಂಬದವರು ಪವನ್ ಗೆ ಬೇಕರಿ ಇಟ್ಟುಕೊಟ್ಟಿದ್ದರು.
ಹತ್ಯೆಗೆ ಕೆಲ ದಿನಗಳ ಮೊದಲು ಕಪಿಲನ ಸಹೋದರ ಪ್ರೇಮ್ ತನ್ನನ್ನು ಹಿಂಬಾಲಿಸುತ್ತಿದ್ದಾನೆ ಮತ್ತು ಜೀವಭಯವಿದೆ ಎಂದು ಪವನ್ ತಾಯಿಗೆ ತಿಳಿಸಿದ್ದ ಎನ್ನಲಾಗಿದೆ.
ಕುಟುಂಬದ ಸಹಾಯದಿಂದ ಸುಮಾರು 45 ದಿನಗಳ ಹಿಂದೆ ರಾಜಾನುಕುಂಟೆಯಲ್ಲಿ ಬೇಕರಿ ಆರಂಭಿಸಿದ್ದ ಪವನ್, ಜೀವನವನ್ನು ಸುಧಾರಿಸಲು ಪ್ರಯತ್ನಿಸುತ್ತಿದ್ದನೆಂದು ತಿಳಿದುಬಂದಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



