ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳು ದಾರುಣ ಸಾವು
ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕಾರಿನ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಡೆದಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕಾರಿನ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಲ್ಲಿದ್ದ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35),ಲೋಹಿತ್ (40) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕನ ಬದಿಯಲ್ಲಿ ಕುಳಿತಿದ್ದವರ ತಲೆ ಕಟ್ ಆಗಿದೆ.
ಉಳಿದ ಇಬ್ಬರು ಗಂಭಿರವಾಗಿ ಗಾಯಗೊಂಡು ಚಳ್ಳಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



