ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಿಗ್ ರಿಲೀಫ್: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು!
ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ.

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಸದ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ.
ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ.
ಸುಪ್ರೀಂ ಕೋರ್ಟ್ನ ನ್ಯಾ. ಸಂಜಯ್ ಕರೋಲ ಅವರ ಪೀಠದಿಂದ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ವಿನಯ್ ಕುಲಕರ್ಣಿ ಶರಣಾಗಿದ್ದರು. ಸಾಕ್ಷಿಗಳಿಗೆ ಬೆದರಿಕೆ ಆರೋಪದ ಮೇಲೆ ಜಾಮೀನು ರದ್ದಾಗಿತ್ತು.
ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡುವಂತೆ ಸಿಬಿಐ ಮನವಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



