ಬೆಂಗಳೂರು: ಹೊಸ ವರ್ಷದಂದೇ ಚಾಕುವಿನಿಂದ ಇರಿದು ಆಟೋ ಚಾಲಕನ ಕೊಲೆ!
ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 36 ವರ್ಷದ ಆಟೋರಿಕ್ಷಾ ಚಾಲಕನಿಗೆ ಅಪರಿಚಿತ ವ್ಯಕ್ತಿಗಳು ಇರಿದು ಕೊಂದಿದ್ದಾರೆ. ಮೃತ ವ್ಯಕ್ತಿಯನ್ನು ರೇಚಣ್ಣ ಪಿ ಎಂದು ಗುರುತಿಸಲಾಗಿದೆ. ಹೂವು ವ್ಯಾಪಾರಿ ಮತ್ತು ಮೃತರ ಹತ್ತಿರದ ಸಂಬಂಧಿ ಗಿರೀಶ್ ಎಸ್ ಕೊಲೆ ದೂರು ದಾಖಲಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 36 ವರ್ಷದ ಆಟೋರಿಕ್ಷಾ ಚಾಲಕನಿಗೆ ಅಪರಿಚಿತ ವ್ಯಕ್ತಿಗಳು ಇರಿದು ಕೊಂದಿದ್ದಾರೆ. ಮೃತ ವ್ಯಕ್ತಿಯನ್ನು ರೇಚಣ್ಣ ಪಿ ಎಂದು ಗುರುತಿಸಲಾಗಿದೆ. ಹೂವು ವ್ಯಾಪಾರಿ ಮತ್ತು ಮೃತರ ಹತ್ತಿರದ ಸಂಬಂಧಿ ಗಿರೀಶ್ ಎಸ್ ಕೊಲೆ ದೂರು ದಾಖಲಿಸಿದ್ದಾರೆ. ಇಂದು ಮುಂಜಾನೆ 12.19 ಗಂಟೆಗೆ ರೇಚಣ್ಣನವರ ಸ್ನೇಹಿತ ಚಂದ್ರಶೇಖರ್ ಎಂಬುವರು ಕರೆ ಮಾಡಿ ರೇಚಣ್ಣರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ನಂದಮ್ ವೃತ್ತದ ಬಳಿಯ ಭುವನೇಶ್ವರಿ ನಗರದಲ್ಲಿರುವ ಅವರ ಮನೆಯ ಮುಂಭಾಗದ ರಸ್ತೆಯಲ್ಲಿ ರೇಚಣ್ಣ ರಕ್ತದ ಮಡುವಿನಲ್ಲಿ ಬದ್ದಿರುವುದು ಕಂಡುಬಂದಿತು ಎಂದು ಪೊಲೀಸರು ತಿಳಿಸಿದರು. ಪ್ರಾಥಮಿಕ ಪರೀಕ್ಷೆಯಲ್ಲಿ ಎದೆಯ ಎಡಭಾಗ ಮತ್ತು ಬೆನ್ನಿನ ಎಡಭಾಗದಲ್ಲಿ ಹರಿತವಾದ ಆಯುಧದಿಂದ ಇರಿದ ಗಾಯಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದರು. ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಳೇ ವೈಷಮ್ಯದಿಂದಾಗಿ ಅಪರಿಚಿತ ವ್ಯಕ್ತಿಗಳು ಹರಿತವಾದ ಆಯುಧವನ್ನು ಬಳಸಿ ರೇಚಣ್ಣನನ್ನು ಕೊಲೆ ಮಾಡಿದ್ದಾರೆ ಎಂದು ದೂರುದಾರರು ಶಂಕಿಸಿದ್ದು ಅಪರಾಧಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶ, ಆರೋಪಿಗಳ ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



