ಕೋಗಿಲು ಅಕ್ರಮ ಮನೆಗಳ ತೆರವು ಪ್ರಕರಣ: ಪರಿಹಾರ ಕೋರಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ
ಮನೆ ಕಳೆದುಕೊಂಡಿರುವ ಜನರಿಗೆ ಪುನರ್ವಸತಿ ಮತ್ತು ಪರಿಹಾರ ನೀಡಬೇಕು ಎಂದು ಕೋರಿ ಜೈಬಾ ತಬಸ್ಸುಮ್ ಹಾಗೂ ಮತ್ತಿತರರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಲೇಔಟ್ ನ ಅನಧಿಕೃತ ಮನೆಗಳ ತೆರವು ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ಗೆ ಗುರುವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.
ಮನೆ ಕಳೆದುಕೊಂಡಿರುವ ಜನರಿಗೆ ಪುನರ್ವಸತಿ ಮತ್ತು ಪರಿಹಾರ ನೀಡಬೇಕು ಎಂದು ಕೋರಿ ಜೈಬಾ ತಬಸ್ಸುಮ್ ಹಾಗೂ ಮತ್ತಿತರರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಹಲವು ಬೇಡಿಕೆಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದಾರೆ.
ಕಳೆದ 30 ವರ್ಷಗಳಿಂದ ಇಲ್ಲಿ 3 ಸಾವಿರ ಜನ ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರಾಶ್ರಿತರಾಗಿದ್ದು, ಅವರಿಗೆ ಎಸ್ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು ಒದಗಿಸುತ್ತಿವೆ.
ಸರ್ಕಾರ ಸಂತ್ರಸ್ತರಿಗೆ 5 ಕಿ.ಮೀ. ಅಂತರದಲ್ಲೇ ಮರುವಸತಿ ಕಲ್ಪಿಸಬೇಕು ಮತ್ತು ಅಲ್ಲಿಯವರೆಗೆ 3 ಹೊತ್ತಿನ ಪೌಷ್ಟಿಕಾಂಶಯುತ ಆಹಾರ ಒದಗಿಸಬೇಕು. 300 ಪ್ರತ್ಯೇಕ ಟೆಂಟ್, ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು. ವೈದ್ಯಕೀಯ ವ್ಯವಸ್ಥೆ ಕಲ್ಪಿಸಿ ಆರೋಗ್ಯ ತಪಾಸಣೆ ಮಾಡಬೇಕು. ಜೊತೆಗೆ ಕಟ್ಟಡ ತೆರವಿಗೆ ಪರಿಹಾರ ನೀಡಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



