ಮರ್ಯಾದಾ ಹತ್ಯೆಗೆ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ: ಡಾ. ಜಿ. ಪರಮೇಶ್ವರ್
ಕುಟುಂಬಸ್ಥರು ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸೂಕ್ತ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇನೆ.

ಹುಬ್ಬಳ್ಳಿ: ಮರ್ಯಾದಾ ಹತ್ಯೆಗೆ ಪ್ರತ್ಯೇಕ ಕಾನೂನಿನ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿ ಗ್ರಾಮೀಣ ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಮಾನ್ಯ ಎಂಬಳನ್ನು ತಂದೆ ಹಾಗೂ ಸಹೋದರರೇ ಹತ್ಯೆ ಮಾಡಿದ್ದರು. ಘಟನೆ ಬೆನ್ನಲ್ಲೇ ಗ್ರಾಮಕ್ಕೆ ಭೇಟಿ ನೀಡಿದ ಪರಮೇಶ್ವರ್ ಅವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಮನಿ ಕುಟುಂಬದೊಂದಿಗೆ ಮಾತನಾಡಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ವಿವೇಕಾನಂದ ದೊಡ್ಡಮನಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಕುಟುಂಬದವರು ಮನವಿ ಮಾಡಿದ್ದಾರೆ. ಅವರ ತಂಗಿಗೂ ಕೂಡ ಹೊಡೆದಿದ್ದಾರೆ. ಚಿಕ್ಕ ಮಗುವಿಗೆ ಹತ್ಯೆ ಮಾಡಿರುವ ವಿಷಯವನ್ನು ಎಲ್ಲರಿಗೂ ಹೇಳಬೇಕು ಎಂದು ಅವಳಿಗೆ ಹೆದರಿಸಿದ್ದಾರೆ. ಕುಟುಂಬಸ್ಥರು ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸೂಕ್ತ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇನೆಂದು ತಿಳಿಸಿದರು.
ಇದೇ ವೇಳೆ ಮರ್ಯಾದಾ ಹತ್ಯೆಗೆ ಪ್ರತೇಕ ಕಾನೂನು ತರಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಈಗಾಗಲೇ ಸಾಕಷ್ಟು ಕಾನೂನುಗಳಿವೆ, ನ್ಯೂನತೆಗಳ ತಿದ್ದುಪಡಿ ಮಾಡಲಾಗುವುದು.ಇದಕ್ಕೆಂದೇ ಪ್ರತ್ಯೇಕ ಕಾನೂನು ಅಗತ್ಯವಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



