ರಾಜ್ಯ

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಅತಿಕ್ರಮಣಕಾರರಿಗೆ ಉಡುಗೊರೆ ಕೊಟ್ಟಂತೆ; ಎಸ್.ಟಿ ಸೋಮಶೇಖರ್

ರಾಜ್ಯಾದ್ಯಂತ ನಿಜವಾದ ಬಡವರು ವರ್ಷಗಳಿಂದ ವಸತಿಗಾಗಿ ಕಾಯುತ್ತಿದ್ದು, ಇದರ ನಡುವೆ ಅಕ್ರಮ ಅತಿಕ್ರಮಣಕಾರರಿಗೆ ಮನೆಗಳನ್ನು ಹಂಚಿಕೆ ಮಾಡಿದರೆ, ಅಕ್ರಮ ಎಸಗಿದವರಿಗೆ ಉಡುಗೊರೆ ನೀಡದಂತಾಗಲಿದೆ.

ಕೋಗಿಲು ನಿರಾಶ್ರಿತರಿಗೆ ವಸತಿ ಭಾಗ್ಯ: ಅತಿಕ್ರಮಣಕಾರರಿಗೆ ಉಡುಗೊರೆ ಕೊಟ್ಟಂತೆ; ಎಸ್.ಟಿ ಸೋಮಶೇಖರ್
ಎಸ್.ಟಿ. ಸೋಮಶೇಖರ್
Published On :

ಬೆಂಗಳೂರು: ಕೋಗಿಲು ನಿರಾಶ್ರಿತರಿಗೆ ಮಾನವೀಯತೆಯ ದೃಷ್ಟಿಯಿಂದ ಮನೆಗಳನ್ನು ನೀಡುವ ಸರ್ಕಾರದ ನಿರ್ಧಾರದ ವಿರುದ್ಧ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ತೀವ್ರವಾಗಿ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಪ್ರದೇಶವನ್ನು ಘನತ್ಯಾಜ್ಯ ನಿರ್ವಹಣೆ ಸೇರಿದಂತೆ ಸಾರ್ವಜನಿಕ ಬಳಕೆಗೆ ಮೀಸಲಿಡಲಾಗಿತ್ತು. ಕಾಂಗ್ರೆಸ್ ಹೈಕಮಾಂಡ್‌ನ ಹಸ್ತಕ್ಷೇಪ ಮತ್ತು ಕೇರಳ ನಾಯಕರ ಟೀಕೆ ಸೇರಿದಂತೆ ರಾಜಕೀಯ ಒತ್ತಡದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 7 ಕಿ.ಮೀ ದೂರದಲ್ಲಿರುವ ಬೈಯ್ಯಪ್ಪನಹಳ್ಳಿಯಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಅರ್ಹ ನಿರಾಶ್ರಿತರಿಗೆ ಪರ್ಯಾಯ ವಸತಿಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ನಿರ್ಧಾರ ಅತಿಕ್ರಮಣದಾರರಿಗೆ ಉಡುಗೊರೆ ಕೊಟ್ಟಂತಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ನಿಜವಾದ ಬಡವರು ವರ್ಷಗಳಿಂದ ವಸತಿಗಾಗಿ ಕಾಯುತ್ತಿದ್ದು, ಇದರ ನಡುವೆ ಅಕ್ರಮ ಅತಿಕ್ರಮಣಕಾರರಿಗೆ ಮನೆಗಳನ್ನು ಹಂಚಿಕೆ ಮಾಡಿದರೆ, ಅಕ್ರಮ ಎಸಗಿದವರಿಗೆ ಉಡುಗೊರೆ ನೀಡದಂತಾಗಲಿದೆ. ಅತಿಕ್ರಮಣದಾರರಿಗೆ ಆದ್ಯತೆ ನೀಡಿದರೆ ಮತ್ತಷ್ಟು ಭೂಕಬಳಿಕೆಗೆ ಪ್ರೋತ್ಸಾಹ ನೀಡಿದಂತಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವು ಮಾಡಿದ್ದು, ಟೀಕೆಗೊಳಗಾದ ಬೆನ್ನಲ್ಲೇ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ಆಶ್ರಯ ಯೋಜನೆ ಅಡಿ ಮನೆ ನೀಡುವುದಾಗಿ ಸರ್ಕಾರ ಹೇಳಿತ್ತು. ಅದರಂತೆ, ಜನವರಿ 2ಕ್ಕೆ ಮನೆ ಹಂಚಿಕೆ ಆಗಲಿದೆ ಎಂದೂ ಹೇಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.