ಅಕ್ರಮ ಬಾಂಗ್ಲಾ ವಲಸಿಗರು ಬೆಂಗಳೂರಿಗೆ ಹೇಗೆ ಬಂದರು? ಮೋದಿ-ಅಮಿತ್ ಶಾ ಏನು ಮಾಡುತ್ತಿದ್ದಾರೆ? ರಾಮಲಿಂಗಾ ರೆಡ್ಡಿ ಪ್ರಶ್ನೆ
ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ, ಹಾಗಾದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು?

ಕೋಲಾರ: ಬೆಂಗಳೂರು ಉತ್ತರ ಸಮೀಪದ ಕೋಗಿಲು ಬಡಾವಣೆಯಲ್ಲಿ ನೆಲೆಸಿರುವವರು ಬಾಂಗ್ಲಾ ದೇಶದವರು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ಎಂದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಪ್ರಶ್ನಿಸಿದ್ದಾರೆ.
ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ, ಹಾಗಾದರೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ. ಏಕೆ ಅವರನ್ನು ಇಲ್ಲಿಯವರೆಗೆ ಬರಲು ಬಿಟ್ಟರು? ಬಾಂಗ್ಲಾದಿಂದ ಅಕ್ರಮವಾಗಿ ಬಂದಿದ್ದರೆ ಬಂಧಿಸಿ ಜೈಲಿಗೆ ಹಾಕಲಿ ಎಂದು ಸವಾಲು ಹಾಕಿದರು.
ರಾಜ್ಯದವರು ಅಥವಾ ಅಕ್ಕಪಕ್ಕದ ರಾಜ್ಯದವರು ಆಗಿದ್ದರೆ ಅರ್ಹರಿಗೆ ಮನೆ ನೀಡಬೇಕಾಗುತ್ತದೆ ಎಂದು ಹೇಳಿದರು.
ಬೆಂಗಳೂರು ಸುತ್ತಮುತ್ತ ಬಿಜೆಪಿ ಶಾಸಕರು ಭೂ ಮಂಜೂರಾತಿ ಸಮಿತಿ ಮೂಲಕ ಸಾವಿರಾರು ಎಕರೆಯನ್ನು ಕಾರ್ಯಕರ್ತರಿಗೆ ನೀಡಿದ್ದಾರೆ. ಸಿಬಿಐ ತನಿಖೆ ನಡೆಸಿದರೆ ಎಲ್ಲವೂ ಹೊರಗೆ ಬರುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



