ರಾಜ್ಯ

ಬಳ್ಳಾರಿ ಫೈರಿಂಗ್: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾಹಿತಿ ನೀಡಿದ ಜಮೀರ್, ಭರತ್ ರೆಡ್ಡಿ!

ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳ್ಳಾರಿ ಫೈರಿಂಗ್: ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾಹಿತಿ ನೀಡಿದ ಜಮೀರ್, ಭರತ್ ರೆಡ್ಡಿ!
ಸಿಎಂ ಸಿದ್ದರಾಮಯ್ಯ ಜೊತೆಗೆ ಸಚಿವ ಜಮೀರ್ ಅಹ್ಮದ್ ಖಾನ್, ಭರತ್ ರೆಡ್ಡಿ
Published On :

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸ ಮುಂದೆ ಜ. 1ರಂದು ರಾತ್ರಿ ನಡೆದಿದ್ದ ಗುಂಡಿನ ದಾಳಿ ಹಾಗೂ ಕಾಂಗ್ರೆಸ್ ನ ಓರ್ವ ಕಾರ್ಯಕರ್ತ ಸಾವನ್ನಪ್ಪಿದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ, ಆಕ್ರೋಶಕ್ಕೆ ಕಾರಣವಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ.

ತೋರಣಗಲ್ ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಶಾಸಕ ಭರತ್ ರೆಡ್ಡಿ ಅವರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳ್ಳಾರಿ ಘಟನೆಗೆ ಸಂಬಂಧಿಸಿದಂತೆ ಸಚಿವರು ಹಾಗೂ ಶಾಸಕರು ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿಯವರು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಡಿಜಿಪಿ ಹಿತೇಂದ್ರ, ಬಳ್ಳಾರಿ ವಲಯದ ಐಜಿ ವರ್ತಿಕಾ ಕಟಿಯಾರ್ ಹಾಗೂ ದಾವಣಗೆರೆ ವಲಯದ ಐಜಿ ರವಿಕಾಂತೇಗೌಡ ಅವರಿಂದಲೂ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.

ಮುಖ್ಯಮಂತ್ರಿ ಸಿಂಧನೂರಿನಿಂದ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿ ಬಳಿಕ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.