ರಾಜ್ಯ

ಚಿಕ್ಕಮಗಳೂರು: ಕಂಠಪೂರ್ತಿ ಕುಡಿದು ಬಂದು ಮಗನನ್ನೇ ಹತ್ಯೆಗೈದ ತಂದೆ; ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಮಗ!

ಕುಡಿತಕ್ಕೆ ದಾಸನಾಗಿದ್ದ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಕಂಠಪೂರ್ತಿ ಕುಡಿದು ಬಂದು ಮಗನನ್ನೇ ಹತ್ಯೆಗೈದ ತಂದೆ; ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಮಗ!
ಸಂಗ್ರಹ ಚಿತ್ರ
Published On :

ಚಿಕ್ಕಮಗಳೂರು: ಕುಡಿತಕ್ಕೆ ದಾಸನಾಗಿದ್ದ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತನನ್ನು 29 ವರ್ಷದ ಪ್ರದೀಪ್ ಆಚಾರ್ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ರಮೇಶ್ ಆಚಾರ್ ದಿನ ಕುಡಿದು ಬರುತ್ತಿದ್ದನು. ಹೀಗಾಗಿ ಅಪ್ಪ ಹಾಗೂ ಮಗನ ನಡುವೆ ಆಗಾಗ ಜಗಳವಾಗುತ್ತಿತ್ತು. ತಡ ರಾತ್ರಿ ಕುಡಿದು ಬಂದು ಜಗಳವಾಡಿದ್ದ ರಮೇಶ್ ಆಚಾರ್ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗ ರಕ್ತದ ಮಡುವಲ್ಲಿ ರಾತ್ರಿಯಿಡಿ ಪರದಾಡಿ ಮೃತಪಟ್ಟಿದ್ದನು. ಬೆಳಗ್ಗೆ ಮೃತಪಟ್ಟಿದ್ದ ಮಗನ ಶವವನ್ನು ಮನೆಯಿಂದ ಹೊರಗೆಳೆದು ತಂದು ಬಿಸಾಡಿದ ನಂತರ ಕೊಲೆ ವಿಷಯ ಗೊತ್ತಾಗಿದೆ. ಸ್ಥಳಕ್ಕಾಗಮಿಸಿದ ಬಾಳೂರು ಠಾಣೆ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.