ಸಾಲು ಮರದ ತಿಮ್ಮಕ್ಕನವರಂತೆ ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಉಳಿಸಬೇಕು: ಸಿಎಂ ಸಿದ್ದರಾಮಯ್ಯ
ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿದ್ದೇನೆ ಎನ್ನುವುದು ಖುಷಿಯ ವಿಚಾರ. ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ ವೇದಿಕೆ ಸೃಷ್ಟಿ ಮಾಡುವ ಕೆಲಸವನ್ನು ಚಿತ್ರಕಲಾ ಪರಿಷತ್ತು ಅರವತ್ತು ವರ್ಷಗಳಿಂದ ಮಾಡುತ್ತಾ ಬಂದಿದೆ. ಚಿತ್ರಸಂತೆ ತನ್ನ 23ನೇ ವರ್ಷಕ್ಕೆ ಕಾಲಿಟ್ಟಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಇಂದು ನಡೆದ 23ನೇ ಚಿತ್ರಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸುಮಾರು 22 ರಾಜ್ಯಗಳು, ನಾಲ್ಕು ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಾಧಕರ ವಸ್ತುಸಂಗ್ರಹಾಲಯಕ್ಕೆ ಬೇಡಿಕೆಯಿದ್ದು, ಸರ್ಕಾರ ಅದನ್ನು ಸಕಾರಾತ್ಮಕವಾಗಿ ಸ್ವೀಕಾರ ಮಾಡಲಿದೆ ಎಂದರು.
ಪರಿಸರ ಉಳಿಸಿ, ಬೆಳೆಸಿ
ಈ ಬಾರಿಯ ಚಿತ್ರಸಂತೆಯ ಧ್ಯೇಯ ವಾಕ್ಯ ಪರಿಸರಕ್ಕೆ ಸಮರ್ಪಿಸಲಾಗಿದೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಅದಕ್ಕಾಗಿ ಪರಿಸರದ ಬಗ್ಗೆ ಜ್ಞಾನ ಅಗತ್ಯ. ಈ ಕುರಿತು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರು ಸೇರಿದಂತೆ ದೇಶದ ಅನೇಕ ರಾಜಧಾನಿಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗಿದ್ದು, ದೆಹಲಿಯಲ್ಲಿ ಬದುಕಲು ಸಾಧ್ಯವಿಲ್ಲದ ವಾತಾವರಣ ನಿರ್ಮಾಣವಾಗುತ್ತಿದೆ. ಪರಿಸರದ ರಕ್ಷಣೆ ಇಂದಿನ ಅಗತ್ಯವಾಗಿದೆ ಎಂದರು.
ಪ್ರತಿ ವರ್ಷ ಮೂರರಿಂದ ಐದು ಕೋಟಿ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಯಾವುದೇ ಪ್ರದೇಶದಲ್ಲಿ ಶೇ. 30ರಷ್ಟು ಕಾಡು ಇರಬೇಕು. ನಮ್ಮಲ್ಲಿ ಶೇಕಡ 20ರಷ್ಟು ಅರಣ್ಯ ಪ್ರದೇಶವಿದೆ. ಇದನ್ನು ಹೆಚ್ಚು ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುವುದು ಎಂದರು.
ಸಾಲು ಮರದ ತಿಮ್ಮಕ್ಕನವರಂತೆ ಗಿಡ ನೆಟ್ಟು ಬೆಳೆಸಿ
ಸಾಲು ಮರದ ತಿಮ್ಮಕ್ಕನವರಂತೆ ಸಾರ್ವಜನಿಕರು ಗಿಡಗಳನ್ನು ನೆಡಬೇಕು. ಮಕ್ಕಳನ್ನು ಸಾಕಿದಂತೆ ಗಿಡಮರಗಳನ್ನು ಅವರು ಸಾಕಿದ್ದ ಕಾರಣ ಹಲವು ಪ್ರಶಸ್ತಿಗಳು ದೊರೆಯಿತು. ಅವರ ಆತ್ಮಕ್ಕೆ ಶಾಂತಿ ದೊರಕಬೇಕಾದರೆ ನಾವೆಲ್ಲರೂ ಗಿಡ ಬೆಳೆಸುವ ಪ್ರಯತ್ನವನ್ನು ಮಾಡಬೇಕು. ಪರಿಸರ ರಕ್ಷಣೆಗಾಗಿ ಹೋರಾಟವನ್ನೇ ಕೈಗೊಂಡ ಅನೇಕರು ನಮ್ಮ ನಡುವೆಯೇ ಇದ್ದಾರೆ. ಗಿಡ ನೆಡಲು ಬಹಳ ಖರ್ಚು ಆಗುವುದಿಲ್ಲ. ಮನಸ್ಸು ಮಾಡಬೇಕಷ್ಟೆ. ಸರ್ಕಾರ ಕೂಡ ಈ ದಿಕ್ಕಿನಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



