RSS ಕುರಿತು ಅವಹೇಳನಕಾರಿ ಹೇಳಿಕೆ: ಸಚಿವ ಪ್ರಿಯಾಂಕ್ ಖರ್ಗೆ-ದಿನೇಶ್ ಗುಂಡೂರಾವ್'ಗೆ ಕೋರ್ಟ್ ನೋಟಿಸ್
ಆರ್‌ಎಸ್‌ಎಸ್ ಸದಸ್ಯರೊಂದಿಗೆ ಸ್ನೇಹ ಮಾಡಬೇಡಿ, ಅವರು ಕುಟುಂಬದವರಾಗಿರಲಿ, ಸಹೋದರರಾಗಿರಲಿ, ತಂದೆ ಅಥವಾ ಮಗನಾಗಿರಲಿ. ಅವರು ವಿಷಕಾರಿಗಳು” ಎಂದು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್ ಎ ಅವರು ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ನ್ಯಾಯಾಲಯ ಮೂವರಿಗೆ ನೋಟಿಸ್ ಜಾರಿ ಮಾಡಿದೆ.
ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 356(2) ಅಡಿಯಲ್ಲಿ ದೂರು ದಾಖಲಿಸಲಾಗಿದ್ದು, ಈ ಸಂಬಂಧ BNSS ನಿಯಮಾವಳಿಗಳಂತೆ ನ್ಯಾಯಾಲಯವು ದೂರುದಾರ ಮತ್ತು ಸಾಕ್ಷಿಗಳಾದ ಮಹೇಶ್ ಹಾಗೂ ಸತೀಶ್ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.
BNSS 2023ರ ಸೆಕ್ಷನ್ 223ರಂತೆ ಪ್ರಕರಣವನ್ನು ಸ್ವೀಕರಿಸುವ ಮೊದಲು ಆರೋಪಿಗಳ ಹೇಳಿಕೆಯನ್ನು ಆಲಿಸುವುದು ಕಡ್ಡಾಯವಾಗಿರುವುದರಿಂದ ನೋಟಿಸ್ ಜಾರಿ ಮಾಡಲಾಗುತ್ತಿದೆ ಎಂದು ನ್ಯಾಯಾಲಯದ ತಿಳಿಸಿದೆ. ಇದೇ ವೇಳೆ ಪ್ರಕರಣದ ವಿಚಾರಣೆಯನ್ನು ಜನವರಿ 14ಕ್ಕೆ ಮುಂದೂಡಲಾಗಿದೆ.
ಸಾರ್ವಜನಿಕ ಮೈದಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು 2025ರ ಅಕ್ಟೋಬರ್ 13ರಂದು ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದರು. ಅದೇ ದಿನ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅವರು, “ಆರ್‌ಎಸ್‌ಎಸ್ ಸದಸ್ಯರೊಂದಿಗೆ ಸ್ನೇಹ ಮಾಡಬೇಡಿ, ಅವರು ಕುಟುಂಬದವರಾಗಿರಲಿ, ಸಹೋದರರಾಗಿರಲಿ, ತಂದೆ ಅಥವಾ ಮಗನಾಗಿರಲಿ. ಅವರು ವಿಷಕಾರಿಗಳು” ಎಂದು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಅಕ್ಟೋಬರ್ 14ರಂದು ಮತ್ತೊಂದು ಪೋಸ್ಟ್ ಕೂಡ ಮಾಡಿದ್ದು, ಇವು ಆರ್‌ಎಸ್‌ಎಸ್‌ನ ಗೌರವಕ್ಕೆ ಧಕ್ಕೆ ತಂದಿವೆ ಎಂದು ದೂರಿನಲ್ಲಿ ಹೇಳಲಾಗಿದೆ.
ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳಿಗೆ ಬೆಂಬಲವಾಗಿ ದಿನೇಶ್ ಗುಂಡೂರಾವ್ ಮಾಧ್ಯಮಗಳಿಗೆ ನೀಡಿದ ಹೇಳಿಕೆಗಳು ಹಾಗೂ ನಲಪಾಡ್ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪ್ರತಿಕ್ರಿಯೆಗಳೂ ಸಂಘಟನೆಯ ಪ್ರತಿಷ್ಠೆಗೆ ಹಾನಿಯುಂಟು ಮಾಡಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

'ಬಿಜೆಪಿ ನೋಡಿ RSS ಅರ್ಥಮಾಡಿಕೊಳ್ಳುವುದು ದೊಡ್ಡ ತಪ್ಪು, ಆರ್‌ಎಸ್‌ಎಸ್ ಅರೆಸೈನಿಕ ಸಂಘಟನೆ ಅಲ್ಲ': ಮೋಹನ್ ಭಾಗವತ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


