ಮೆಜೆಸ್ಟಿಕ್-ಮಲ್ಲೇಶ್ವರ ರಸ್ತೆ 3 ತಿಂಗಳು ಬಂದ್: ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ
ಮೊದಲು ಮೆಜೆಸ್ಟಿಕ್‌ನಿಂದ ಮಂತ್ರಿಮಾಲ್ ಮಾರ್ಗವಾಗಿ ಕೇವಲ 10 ನಿಮಿಷದಲ್ಲಿ ಮಲ್ಲೇಶ್ವರಂ ಪ್ರವೇಶ ಮಾಡಬಹುದಿತ್ತು. ಆದರೆ ರಸ್ತೆ ಬಂದ್ ಆಗಿರುವ ಕಾರಣ ಪೀಕ್ ಅವಧಿಯಲ್ಲಿ ಮಲ್ಲೇಶ್ವರಂಗೆ ಬರಲು ಕನಿಷ್ಠ 30 ರಿಂದ 1 ಗಂಟೆ ಸಮಯ ಬೇಕಾಗಿದೆ.

ಬೆಂಗಳೂರು: ಮೆಜೆಸ್ಟಿಕ್‌ನಿಂದ ಮಲ್ಲೇಶ್ವರದ ಮಂತ್ರಿಮಾಲ್‌ವರೆಗಿನ ರಸ್ತೆಗೆ ವೈಟ್ ಟ್ಯಾಪಿಂಗ್ ನಡೆಯಲಿರುವ ಕಾರಣ ಮೂರು ತಿಂಗಳು ಬಂದ್ ಆಗಲಿದೆ. ಇದು ಮುಖ್ಯರಸ್ತೆಯಾಗಿರುವ ಕಾರಣ ತುಂಬಾ ಮಂದಿಗೆ ಓಡಾಟಕ್ಕೆ ಸಮಸ್ಯೆಯಾಗಲಿದೆ.
ಬಿ ಸ್ಮೈಲ್ ಕಡೆಯಿಂದ ವೈಟ್ ಟ್ಯಾಪಿಂಗ್ ಕಾಮಗಾರಿ ಕೈಗೊಂಡಿದ್ದು ಮುಂದಿನ ಮೂರು ತಿಂಗಳು ರಸ್ತೆ ಬಂದ್ ಆಗಲಿದೆ. ಬಂದ್ ಆಗಿರುವುದರಿಂದ ಮೆಜೆಸ್ಟಿಕ್‌ನಿಂದ ಬರುವ ವಾಹನಗಳು ಓಕುಳಿಪುರಂ ಅಂಡರ್ ಪಾಸ್ ಸುಜಾತ್ ಸರ್ಕಲ್ ಮಾರ್ಗವಾಗಿ ಮಲ್ಲೇಶ್ವರಂ ಪ್ರವೇಶ ಮಾಡಬೇಕಿದೆ ಹೀಗಾಗಿ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಸ್ತಿ ಆಗಲಿದೆ.
ಮೊದಲು ಮೆಜೆಸ್ಟಿಕ್‌ನಿಂದ ಮಂತ್ರಿಮಾಲ್ ಮಾರ್ಗವಾಗಿ ಕೇವಲ 10 ನಿಮಿಷದಲ್ಲಿ ಮಲ್ಲೇಶ್ವರಂ ಪ್ರವೇಶ ಮಾಡಬಹುದಿತ್ತು. ಆದರೆ ರಸ್ತೆ ಬಂದ್ ಆಗಿರುವ ಕಾರಣ ಪೀಕ್ ಅವಧಿಯಲ್ಲಿ ಮಲ್ಲೇಶ್ವರಂಗೆ ಬರಲು ಕನಿಷ್ಠ 30 ರಿಂದ 1 ಗಂಟೆ ಸಮಯ ಬೇಕಾಗಿದ್ದು ವಾಹನ ಸವಾರರು ಹೈರಾಣಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



