ರಾಜ್ಯ

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಕಲಾಪ ಸ್ಥಗಿತ!

ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ಧಾವಿಸಿದ್ದು, ಆವರಣದಲ್ಲಿ ಸಂಪೂರ್ಣ ಶೋಧ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೈಸೂರು ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಕಲಾಪ ಸ್ಥಗಿತ!
ಸಾಂದರ್ಭಿಕ ಚಿತ್ರ
Published On :

ಮೈಸೂರು: ಮೈಸೂರಿನ ಜಿಲ್ಲಾ ನ್ಯಾಯಾಲಯಕ್ಕೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕಲಾಪ ಸ್ಥಗಿತಗೊಳಿಸಿ, ಅಲ್ಲಿದ್ದವರನ್ನು ಹೊರಗೆ ಕಳುಹಿಸಲಾಯಿತು.

ಬಾಂಬ್ ಬೆದರಿಕೆ ನಂತರ, ನ್ಯಾಯಾಂಗ ಅಧಿಕಾರಿಗಳು, ವಕೀಲರು, ದಾವೆದಾರರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಕೋರ್ಟ್ ಆವರಣದಿಂದ ಸ್ಥಳಾಂತರಿಸಲಾಯಿತು ಮತ್ತು ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ಧಾವಿಸಿದ್ದು, ಆವರಣದಲ್ಲಿ ಸಂಪೂರ್ಣ ಶೋಧ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.