ಯುರೋಪ್‌ನಲ್ಲಿ ಎಂಜಿನಿಯರಿಂಗ್ ಶಿಕ್ಷಣ: ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ಯುವಕ ಮಹಡಿಯಿಂದ ಬಿದ್ದು ಸಾವು!
ಬುಧವಾರ ಬೆಂಗಳೂರಿನ ಶೆಟ್ಟಿಹಳ್ಳಿಯ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಪೋಷಕರಾದ ಕಿಶೋರ್ ಮತ್ತು ಜಯಶ್ರೀ ಅವರ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಯುರೋಪ್‌ನಲ್ಲಿ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್‌ನಲ್ಲಿ ಶಿಕ್ಷಣ ಮುಗಿಸಿ ಇತ್ತೀಚೆಗೆ ಭಾರತಕ್ಕೆ ಮರಳಿದ್ದ 26 ವರ್ಷದ ಯುವಕ ಬೆಂಗಳೂರಿನ ಕಟ್ಟಡದ 16 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ.
ನಿಕ್ಷಾಪ್ ಮೃತ ಎಂಜಿನೀಯರ್. ಎರಡು ದಿನಗಳಿಂದ ಹೆಸರಘಟ್ಟದ ಗೌಡಿಯ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ಬೆಂಗಳೂರಿನ ಶೆಟ್ಟಿಹಳ್ಳಿಯ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಪೋಷಕರಾದ ಕಿಶೋರ್ ಮತ್ತು ಜಯಶ್ರೀ ಅವರ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಕೊಳ್ಳಲು ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲವು ವರ್ಷಗಳಿಂದ ತಮ್ಮ ಮಗ ಸ್ಕಿಜೋಫ್ರೇನಿಯಾದಿಂದ ಬಳಲುತ್ತಿದ್ದರು ಎಂದು ನಿಕ್ಷಾಪ್ ತಂದೆ ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



