EVM ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ
ಕಳೆದ ಜನವರಿ 3 ರಂದು ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ.

ಬೆಂಗಳೂರು: ರಾಜ್ಯದಲ್ಲಿ ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ಅವರು, ಕಳೆದ ಜನವರಿ 3 ರಂದು ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ ಎಂದು ಹೇಳಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗ ನಡೆಸಿದ ಸಮೀಕ್ಷೆಯಲ್ಲಿ ಶೇ. 85 ರಷ್ಟು ಮಂದಿ ವಿದ್ಯುನ್ಮಾನ ಮತ ಯಂತ್ರಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



