ಬೆಂಗಳೂರು: ಕೋಗಿಲು ಬಳಿಕ ಈಗ ಸಾರಾಯಿಪಾಳ್ಯದಲ್ಲಿ JCB ಘರ್ಜನೆ; 60 ಅಕ್ರಮ ಮನೆಗಳ ತೆರವು, ನಿವಾಸಿಗಳ ಆಕ್ರೋಶ, Video!
ಬೆಂಗಳೂರಿನ ಕೋಗಿಲು ಕ್ರಾಸ್ ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಕ್ರಮ ಮನೆಗಳನ್ನು ನೆಲಸಮಗೊಳಿಸಿದ್ದ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.

ಬೆಂಗಳೂರು: ಬೆಂಗಳೂರಿನ ಕೋಗಿಲು ಕ್ರಾಸ್ ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಕ್ರಮ ಮನೆಗಳನ್ನು ನೆಲಸಮಗೊಳಿಸಿದ್ದ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಬೆಳ್ಳಂ ಬೆಳಗ್ಗೆ 7 ಗಂಟೆಯಿಂದಲೇ ಜೆಸಿಬಿ ಮೂಲಕ ಅಕ್ರಮ ಮನೆಗಳನ್ನು ನೆಲಸಗೊಳಿಸುತ್ತಿದೆ. ನಾಗವಾರ ಬಳಿಯ ಥಣಿಸಂದ್ರದ ಅಶ್ವತ್ಥ್ ನಗರದಲ್ಲಿ ಅಕ್ರಮ ಮನೆಗಳ ತೆರವು ಕಾರ್ಯ ನಡೆದಿದೆ. ಸುಮಾರು 2 ಎಕರೆ ಬಿಡಿಎ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿಕೊಳ್ಳಲಾಗಿದ್ದ ಸುಮಾರು 60 ಮನೆಗಳನ್ನು ತೆರವು ಮಾಡಲಾಗಿದೆ ಎಂದು ಬಿಡಿಎ ಮಾಹಿತಿ ನೀಡಿದೆ. ಆದರೆ ಯಾವುದೇ ಮಾಹಿತಿ ಅಥವಾ ನೋಟಿಸ್ ನೀಡದೆ ಮನೆಗಳ ತೆರವು ಮಾಡಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಬಿಡಿಎ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



