ರಾಜ್ಯ

ಬೆಂಗಳೂರು: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಆಡಳಿತ ಮಂಡಳಿ ಕಿರುಕುಳ ಆರೋಪ

ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ.

ಬೆಂಗಳೂರು: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಆಡಳಿತ ಮಂಡಳಿ ಕಿರುಕುಳ ಆರೋಪ
ವಿದ್ಯಾರ್ಥಿನಿ ಆತ್ಮಹತ್ಯೆ
Published On :

ಬೆಂಗಳೂರು: ಬೊಮ್ಮನಹಳ್ಳಿಯ ಪ್ರತಿಷ್ಠಿತ ಖಾಸಗಿ ಡೇಂಟಲ್ ಕಾಲೇಜಿನಲ್ಲಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಡೆಂಟಲ್ ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಮೃತಳನ್ನು 23 ವರ್ಷದ ಯಶಸ್ವಿನಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸೆಮಿನಾರ್ ಗೆ ಅವಕಾಶ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನಿಸಲಾಗಿದೆ.

ಕಣ್ಣು ನೋವಿನ ಕಾರಣಕ್ಕೆ ಯಶಸ್ವಿನಿ ಕಳೆದ ಬುಧವಾರ ಕಾಲೇಜಿಗೆ ಹೋಗಿರಲಿಲ್ಲ. ಮರುದಿನ ಕಾಲೇಜಿಗೆ ಹೋದ ವಿದ್ಯಾರ್ಥಿನಿಗೆ ಪ್ರಾಧ್ಯಾಪಕ, ಕಣ್ಣಿಗೆ ಯಾವ ಡ್ರಾಪ್ಸ್ ಹಾಕಿದೆ? ಎಷ್ಟು ಹನಿ ಡ್ರಾಪ್ಸ್ ಹಾಕಿದೆ? ಎಂದೆಲ್ಲಾ ಪ್ರಶ್ನಿಸಿ ಅವಮಾನಿಸಿದ್ದರು. ಇದರಿಂದ ನೊಂದು ವಿದ್ಯಾರ್ಥಿನಿ ದುಡುಕಿನ ನಿರ್ಧಾರ ಕೈಗೊಂಡು ಸಾವಿಗೆ ಶರಣಾಗಿದ್ದಾಳೆ. ಮಗಳನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ತನ್ನ ಮಗಳನ್ನು ಅವಮಾನಿಸಿದ ಕಾಲೇಜಿನ ಪ್ರಾಂಶುಪಾಲ ಹಾಗೂ ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.