ರಾಜ್ಯ

ವಿಚ್ಛೇದಿತ ಮಹಿಳೆಗೆ ಬಾಳು ಕೊಡ್ತೀನಿ ಅಂತ ಹೇಳಿ ಮಗು ಕೊಟ್ಟು, 36 ಲಕ್ಷ ರೂ ಹಣ ಹೊತ್ತು ಪರಾರಿಯಾದ ಭೂಪ!

ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆ ಪೊಲೀಸ್ ದೂರು ನೀಡಿದ್ದು, ಮಹಿಳೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಚ್ಛೇದಿತ ಮಹಿಳೆಗೆ ಬಾಳು ಕೊಡ್ತೀನಿ ಅಂತ ಹೇಳಿ ಮಗು ಕೊಟ್ಟು, 36 ಲಕ್ಷ ರೂ ಹಣ ಹೊತ್ತು ಪರಾರಿಯಾದ ಭೂಪ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ವಿಚ್ಛೇದಿತ ಮಹಿಳೆಯನ್ನು ಮದುವೆಯಾದ ವ್ಯಕ್ತಿಯೊಬ್ಬ ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬನಶಂಕರಿಯಲ್ಲಿ ಮಹಿಳೆ ಪೊಲೀಸ್ ದೂರು ನೀಡಿದ್ದು, ಮಹಿಳೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬನಶಂಕರಿಯ ನಿವಾಸಿ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ದೂರು ನೀಡಿದ್ದು, ಬಾಳು ಕೊಡುವುದಾಗಿ ಹೇಳಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ತೆಗೆದುಕೊಂಡು ಪರಾರಿಯಾಗಿದ್ದಾನೆ.

ಮಹಿಳೆ ದಾಖಲಿಸಿರುವ ದೂರಿನಲ್ಲಿರುವಂತೆ ಕಳೆದ 10 ವರ್ಷಗಳಿಂದ ಮೋಹನ್ ರಾಜ್ ಪರಿಚಯವಿದ್ದು, 2022ರಲ್ಲಿ ಇಬ್ಬರ ನಡುವೆ ಮದುವೆ ನಡೆದಿತ್ತು. 2023ರ ಫೆಬ್ರವರಿಯಲ್ಲಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ 2025ರಲ್ಲಿ ಏಕಾಏಕಿ ಮನೆ ಬಿಟ್ಟು ಹೋದ ಮೋಹನ್ ರಾಜ್ ಇಂದಿಗೂ ಪತ್ತೆಯಾಗಿಲ್ಲ.

ಸಂತ್ರಸ್ತೆಯು 2021ರಲ್ಲಿ ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದರು. ಮೊದಲ ಮದುವೆಯ ವಿಚಾರ ಸಂಪೂರ್ಣವಾಗಿ ತಿಳಿದಿದ್ದರೂ ಮೋಹನ್ ರಾಜ್ ಮದುವೆಯಾಗಿದ್ದಾನೆ ಎಂದು ತಿಳಿಸಿದ್ದಾರೆ. ಮೊದಲ ಪತಿಗೆ ಅನಾರೋಗ್ಯ ಸಮಸ್ಯೆ ಇದ್ದುದರಿಂದ ವಿಚ್ಛೇದನ ಪಡೆದಿದ್ದೆ ಎಂದು ಮಹಿಳೆ ಸ್ಪಷ್ಟಪಡಿಸಿದ್ದಾರೆ.

ಮನೆ ಕಟ್ಟೋಣ ಅಂತ ಹೇಳಿ ಹಣ ಪಡೆದ ಆರೋಪಿ

ಮದುವೆಯಾದ ಬಳಿಕ ಹೊಸ ಮನೆ ಕಟ್ಟೋಣ, ಹೊಸ ಜೀವನ ಶುರು ಮಾಡೋಣ ಎಂದು ನಂಬಿಸಿ ಮಹಿಳೆಯಿಂದ ಹಣ ಪಡೆದಿದ್ದಾನೆ ಎಂಬ ಆರೋಪವಿದೆ. ಚಿನ್ನಾಭರಣ ಅಡವಿಟ್ಟು, ಸಾಲ ಪಡೆದು ಒಟ್ಟು 36 ಲಕ್ಷ ರೂಪಾಯಿ ನೀಡಿದ್ದೇನೆ ಎಂದು ಮಹಿಳೆ ದೂರಿದ್ದಾರೆ. ಈಗ ಹಣ ಕೇಳಿದರೆ ‘ನೀನು ಯಾರು ಅಂತಲೇ ಗೊತ್ತಿಲ್ಲ’ ಎಂದು ಹೇಳುತ್ತಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪೊಲೀಸರಿಂದಲೇ ಅನ್ಯಾಯ ಆರೋಪ

ಇನ್ನು ನ್ಯಾಯ ಕೇಳಲು ಮೋಹನ್ ರಾಜ್ ಮನೆ ಬಳಿ ಹೋದಾಗ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿರುವ ಮಹಿಳೆ ಪೊಲೀಸರ ವಿರುದ್ಧವೂ ಆರೋಪ ಮಾಡಿದ್ದಾರೆ. ಈವರೆಗೆ ನಾಲ್ಕು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ನ್ಯಾಯ ಸಿಗುತ್ತಿಲ್ಲ. ಮತ್ತೊಮ್ಮೆ ದೂರು ನೀಡಿದರೆ ‘ನಿನ್ನನ್ನೇ ಒಳಗೆ ಹಾಕ್ತೀವಿ’ ಎಂದು ಪೊಲೀಸರು ಹೆದರಿಸಿದ್ದರು. ಪೊಲೀಸರೊಂದಿಗೆ ಆರೋಪಿಗೆ ನಂಟಿದೆ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಕೊನೆಗೆ ಇದೀಗ ಆರೋಪಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.