ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ: ಸಿಎಂ ಸಿದ್ದರಾಮಯ್ಯ
ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ.

ಮಂಗಳೂರು: ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುವುದು ಎಂದು ಹೇಳಿದರು.
ಇದೇ ವೇಳೆ ಬಳ್ಳಾರಿ ಬ್ಯಾನರ್ ತೆರವು ಗಲಾಟೆ ಕುರಿತು ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ತಾಕತ್ತಿದ್ದರೆ ಬಳ್ಳಾರಿಗೆ ಬರುವಂತೆ ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಬಿಜೆಪಿ ಪಕ್ಷ ಪಾದಯಾತ್ರೆ ಮಾಡುವ ಅಗತ್ಯ ಏನಿದೆ? ಎಂದು ಪ್ರಶ್ನಿಸಿದ್ದಾರೆ.
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಕಾರಣವಾಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರ ಮೇಲಿನ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



