ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಗುಡ್‌ನ್ಯೂಸ್: ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ; ಸರ್ಕಾರ ಭರವಸೆ
ವೈದ್ಯಕೀಯ ಕಾರಣಗಳಿಗೆ ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇಲಾಖೆಯ ಪೋರ್ಟಲ್ ಮುಕ್ತವಾಗಿರಿಸಿದಾಗ ಬೇರೆಯವರೂ ಅರ್ಜಿ ಹಾಕಿದ್ದು, ಅಂತಹ ಮೂರು ಲಕ್ಷ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರು: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಭಾನುವಾರ ಹೇಳಿದ್ದಾರೆ.
ಕಲಬುರಗಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಸೇರಿ ನಾನಾ ಕಾರಣಗಳಿಂದ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿ ನೀಡಲು ಸಾಧ್ಯವಾಗಿಲ್ಲ. ಸುಮಾರು 2.5ರಿಂದ 3ಲಕ್ಷ ಅರ್ಜಿ ಗಳು ಸದ್ಯ ಬಾಕಿ ಇರುವ ಮಾಹಿತಿ ಇದ್ದು, ಎಲ್ಲವೂ ಪರಿಶೀಲನೆ ಮಾಡಿ ಹೊಸ ಪಡಿತರ ಚೀಟಿ ಶೀಘ್ರ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ವೈದ್ಯಕೀಯ ಕಾರಣಗಳಿಗೆ ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇಲಾಖೆಯ ಪೋರ್ಟಲ್ ಮುಕ್ತವಾಗಿರಿಸಿದಾಗ ಬೇರೆಯವರೂ ಅರ್ಜಿ ಹಾಕಿದ್ದು, ಅಂತಹ ಮೂರು ಲಕ್ಷ ಅರ್ಜಿಗಳ ಪರಿಶೀಲನೆ ನಡೆಯುತ್ತಿದೆ. ಫೆಬ್ರುವರಿ ತಿಂಗಳಿಂದ ಹೊಸ ಪಡಿತರ ಚೀಟಿಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಬಿಪಿಎಲ್ ಕಾರ್ಡ್‌ದಾರರಿಗೆ 5 ಕೆ.ಜಿ ಅಕ್ಕಿ ನೀಡಲಾಗುತ್ತಿತ್ತು. ಅಕ್ಕಿ ಬದಲು ದಕ್ಷಿಣ ಕರ್ನಾಟಕದಲ್ಲಿ ರಾಗಿ, ಉತ್ತರ ಕರ್ನಾಟಕದಲ್ಲಿ ಜೋಳ, ತೊಗರಿ ಬೇಳೆ ನೀಡಲು ಮುಂದಾಗಿದ್ದೇವೆ’ ಎಂದರು.
ಸಿಎಂ ಬದಲಾವಣೆ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮಗೊಂದು ಹೈಕಮಾಂಡ್ ಇದೆ. ಯಾರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಅಥವಾ ಯಾರು ಇಳಿಯಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ನಮಗೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದೆ. ಈ ವಿಚಾರವನ್ನು ನಮಗೆ ಬಿಡಿ’ ಎಂದು. ಹಾಗಾಗಿ ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಸಿದ್ದರಾಮಯ್ಯ ಅವರು ಕೂಡ ಹೈಕಮಾಂಡ್ ಸೂಚನೆಯನ್ನು ಮೀರದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯ ರಾಜಕಾರಣದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಸರ್ಕಾರದ ಗಮನ ಕೇವಲ ಜನಪರ ಕೆಲಸಗಳ ಕಡೆಗೆ ಇದೆ ಎಂದು ಇದೇ ವೇಳೆ ಪುನರುಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



