ರಾಜ್ಯ

ಬೆಂಗಳೂರು: ಇಬ್ಬರು ವಿದೇಶಿಗರ ಬಂಧನ; ಸುಮಾರು 1 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ!

ಆರೋಪಿಗಳಿಂದ 101 ಗ್ರಾಂ ಕೊಕೇನ್, 481 ಗ್ರಾಂ ಹೈಡ್ರೋ ಗಾಂಜಾ, ಅಪರಾಧಕ್ಕೆ ಬಳಸಲಾದ ಮೊಬೈಲ್ ಫೋನ್‌ಗಳು ಮತ್ತು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಇಬ್ಬರು ವಿದೇಶಿಗರ ಬಂಧನ; ಸುಮಾರು 1 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಪ್ರತ್ಯೇಕ ಮಾದಕ ದ್ರವ್ಯ ದಂಧೆ ಪ್ರಕರಣಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿಸಿಬಿಯ ಮಾದಕ ದ್ರವ್ಯ ನಿಯಂತ್ರಣ ಘಟಕ ಬುಧವಾರ ತಿಳಿಸಿದೆ.

ಆರೋಪಿಗಳಿಂದ 101 ಗ್ರಾಂ ಕೊಕೇನ್, 481 ಗ್ರಾಂ ಹೈಡ್ರೋ ಗಾಂಜಾ, ಅಪರಾಧಕ್ಕೆ ಬಳಸಲಾದ ಮೊಬೈಲ್ ಫೋನ್‌ಗಳು ಮತ್ತು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ ಸುಮಾರು 1 ಕೋಟಿ ರೂ. ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೊದಲ ಕಾರ್ಯಾಚರಣೆಯಲ್ಲಿ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೆಇಐಎಸ್ ಲೇಔಟ್‌ನಲ್ಲಿ ವ್ಯಕ್ತಿಯೊಬ್ಬರು ಹೈಡ್ರೊ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಮಾದಕ ದ್ರವ್ಯ ನಿಯಂತ್ರಣ ಘಟಕದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ.

ಅಂದಾಜು 48 ಲಕ್ಷ ಮೌಲ್ಯದ ಹೈಡ್ರೋ ಗಾಂಜಾ ಹಾಗೂ ಅಪರಾಧಕ್ಕೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ವಿದೇಶಿ ಪ್ರಜೆಯೊಬ್ಬರು ಕೊಕೇನ್ ಸರಬರಾಜು ಮಾಡುತ್ತಿದ್ದಾರೆ ಎಂಬ ಸುಳಿವು ಆಧರಿಸಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತರಿಂದ ಅಂದಾಜು 50.6 ಲಕ್ಷ ಮೌಲ್ಯದ ಕೊಕೇನ್, ಮೊಬೈಲ್ ಫೋನ್ ಮತ್ತು ಅಪರಾಧಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇಬ್ಬರು ಆರೋಪಿಗಳ ರಾಷ್ಟ್ರೀಯತೆಯನ್ನು ಪೊಲೀಸರು ಬಹಿರಂಗಪಡಿಸಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.