ಬೆಂಗಳೂರು: ಖಾರದ ಪುಡಿ ಎರಚಿ ರೌಡಿಶೀಟರ್ ಮೊಹಮ್ಮದ್ ಶಬ್ಬೀರ್ ಭೀಕರ ಹತ್ಯೆ
ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿ ಶೀಟರ್ ಒಬ್ಬನನ್ನು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ನಟೋರಿಯಸ್ ರೌಡಿ ಶೀಟರ್ ಒಬ್ಬನನ್ನು ಅಟ್ಟಾಡಿಸಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಮ್ಮನಪಾಳ್ಯ ನಿವಾಸಿ 28 ವರ್ಷದ ಮೊಹಮ್ಮದ್ ಶಬ್ಬೀರ್ ಎಂಬಾತನನ್ನು 6 ಜನ ದುಷ್ಕರ್ಮಿಗಳ ತಂಡ ನಡು ರಸ್ತೆಯಲ್ಲಿಯೇ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ. ಸೋಮವಾರ ರಾತ್ರಿ ತಮ್ಮ ಸ್ನೇಹಿತನನ್ನ ಮಾತಾಡಿಸಿ ಮೊಹಮ್ಮದ್ ಶಬ್ಬೀರ್ ಸ್ನೇಹಿತರ ಜೊತೆ ಆಟೋದಲ್ಲಿ ವಾಪಸ್ ಆಗುತ್ತಿದ್ದನು. ಈ ವೇಳೆ ಮಂಗಮ್ಮನಪಾಳ್ಯ ಮುಖ್ಯ ರಸ್ತೆಯ ತಿರುವಿನಲ್ಲಿ ಆರು ಮಂದಿ ದುಷ್ಕರ್ಮಿಗಳು ಖಾರದ ಪುಡಿ ಏಕಾಏಕಿ ಎರಚಿ ಮಚ್ಚು, ಲಾಂಗ್ ನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶಬ್ಬೀರ್ ಸ್ಥಳದಲ್ಲೇ ಮೃತಪಟ್ಟಿದ್ದರೆ ಉಳಿದ ಐವರಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



