ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಧಮ್ಕಿ: ಎರಡು FIR ದಾಖಲು
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ರಾಜೀವ್ ಗೌಡ ವಿರುದ್ಧ ಪೌರಾಯುಕ್ತ ಅಮೃತ ಗೌಡ ಪೊಲೀಸರಿಗೆ ದೂರು ನೀಡಿದ್ದಾರೆ. ಮತ್ತೊಂದೆಡೆ ಸ್ಥಳೀಯ ಜೆಡಿಎಸ್ ಶಾಸಕ ಬಿಎಂ ರವಿಕುಮಾರ್ ವಿರುದ್ಧವೂ ರಾಜೀವ್ ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಜೆಡಿಎಸ್ ವತಿಯಿಂದ ದೂರು ನೀಡಲಾಗಿದೆ. ಹೀಗಾಗಿ 2 ಎಫ್‌ಐಆರ್‌ಗಳು ದಾಖಲಾಗಿವೆ.
ತಲೆಮರೆಸಿಕೊಂಡಿರುವ ರಾಜೀವ್ ಗೌಡ
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಜನಪ್ರತಿನಿಧಿ ಅಲ್ಲದಿದ್ದರೂ ಆಡಳಿತ ನಡೆಸಲು ಯತ್ನ ಆರೋಪ
ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರು ಇದ್ದರೂ ಅಲ್ಲಿ ದರ್ಬಾರ್ ನಡೆಸಲು ರಾಜೀವ್ ಗೌಡ ಯತ್ನಿಸುತ್ತಿದ್ದಾರೆ. ಯಾರೇ ಅಧಿಕಾರಿಗಳು ಬಂದರೂ ತಮ್ಮ ಸಮ್ಮತಿ ಪಡೆಯುವಂತೆ ಒತ್ತಡ ಹೇರುತ್ತಿದ್ದರು. ವಿವಿಧ ಇಲಾಖೆಗಳಲ್ಲಿ ತಮ್ಮದೇ ಮಾತು ನಡೆಯಬೇಕು ಎಂದು ಒತ್ತಡ ಹೇಳುತ್ತಿದ್ದರು ಎಂಬ ಆರೋಪಗಳು ಕೂಡ ಈಗ ಕೇಳಿ ಬಂದಿವೆ.
ಏನಿದು ಗಲಾಟೆ?
ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಕಟ್ಟಿದ್ದ ಬ್ಯಾನರ್ ತೆರವುಗೊಳಿಸಿದ್ದರಿಂದ ಸಿಟ್ಟಾಗಿದ್ದ ರಾಜೀವ್ ಗೌಡ ಪೌರಾಯುಕ್ತೆ ಅಮೃತ ಗೌಡಗೆ ದೂರವಾಣಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ಮತ್ತು ಅಶ್ಲೀಲವಾಗಿ ನಿಂದಿಸಿದ್ದರು. ಈ ವಿಚಾರವಾಗಿ ಅಮೃತ ಗೌಡ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. ನಂತರ, ಪೊಲೀಸರಿಗೂ ದೂರು ನೀಡಿದ್ದರು. ಈ ವಿಚಾರ ನಂತರ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಶಿಡ್ಲಘಟ್ಟ ಮುನ್ಸಿಪಲ್ ಕಮಿಷನರ್ಗೆ ಅವಾಚ್ಯ ಪದ ಬಳಕೆ: ರಾಜೀವ್ ಗೌಡ ವಿರುದ್ಧ ದೂರು; ಕ್ಷಮೆಯಾಚಿಸಿದ 'ಕೈ' ಮುಖಂಡ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


