ರಾಯಚೂರು: ತಿಂಥಣಿ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಬ್ರಹ್ಮೈಕ್ಯ
ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಸಿದ್ದರಾಮನಂದ ಸ್ವಾಮೀಜಿ ಮೊನ್ನೆ 12, 13 ಮತ್ತು 14ರಂದು ನಡೆದ ಹಾಲುಮತ ಉತ್ಸವ ಕಾರ್ಯಕ್ರಮಗಳನ್ನು ಅವರು ಸ್ವತಃ ನಡೆಸಿಕೊಟ್ಟಿದ್ದರು.

ರಾಯಚೂರು: ರಾಯಚೂರಿನ ತಿಂಥಣಿ ಬ್ರಿಡ್ಜ್ ಸಮೀಪದ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49ವ) ಅವರು ಹೃದಯಾಘಾತದಿಂದ ಬ್ರಹ್ಮೈಕ್ಯರಾಗಿದ್ದಾರೆ. ನಸುಕಿನ ಜಾವ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಅವರು ನಿಧನರಾದರು.
ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಬಳಿಯಿರುವ ಕಾಗಿನೆಲೆ ಕನಕ ಗುರುಪೀಠದ ಮೂಲಕ ಸಿದ್ದರಾಮನಂದ ಸ್ವಾಮೀಜಿ ಮೊನ್ನೆ 12, 13 ಮತ್ತು 14ರಂದು ನಡೆದ ಹಾಲುಮತ ಉತ್ಸವ ಕಾರ್ಯಕ್ರಮಗಳನ್ನು ಸ್ವತಃ ನಡೆಸಿಕೊಟ್ಟಿದ್ದರು.
ಕಳೆದ 2023 ಮತ್ತು 2024ರಲ್ಲಿ ಇದೇ ಮಠದ ಉತ್ಸವಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಎಲ್ಲಾ ರಾಜಕೀಯ ಪಕ್ಷಗಳ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.
ಸಿದ್ದರಾಮನಂದ ಸ್ವಾಮೀಜಿಗಳ ಅಕಾಲಿಕ ನಿಧನದಿಂದ ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ. ಸ್ವಾಮೀಜಿಗಳ ಅಂತ್ಯಕ್ರಿಯೆಯನ್ನು ತಿಂಥಣಿಯ ಕನಕ ಗುರುಪೀಠದಲ್ಲಿಯೇ ನಡೆಸಲಾಗುವುದು. ಹಾಲುಮತದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಭಕ್ತರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


