ಎಲ್ಲಾ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ
ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ ಮಾಡಿಕೊಳ್ಳಬೇಕು.

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಒಂದು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸವಿರುವ ಸುತ್ತೂರು ಮಠ ಶಿಕ್ಷಣಕ್ಕೆ ಮೊದಲಿನಿಂದಲೂ ಹೆಚ್ಚು ಒತ್ತು ನೀಡುತ್ತಾ ಬಂದಿದೆ. ಧಾರ್ಮಿಕವಾಗಿ ತೊಡಗಿಸಿಕೊಂಡಿರುವುದರ ಜೊತೆಗೆ ಜ್ಞಾನ ಮತ್ತು ಅನ್ನದಾಸೋಹಕ್ಕೂ ಮಹತ್ವ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಇಂದು ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ 'ಕೃಷಿಯಲ್ಲಿ ಮಹಿಳೆ ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ' ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.
ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣ ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ ಧರ್ಮಕ್ಕಿಂತ ಮಾನವ ಧರ್ಮ ಮೇಲು ಎಂದು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲತಃ ಮನುಷ್ಯರು. ಯಾವುದೇ ಧರ್ಮವಿದ್ದರೂ ಮನುಷ್ಯರು ಪರಸ್ಪರ ಪ್ರೀತಿಸಬೇಕು ಎಂದು ಹೇಳುತ್ತದೆಯೇ ವಿನಃ ದ್ವೇಷ ಮಾಡಿ ಎಂದು ಹೇಳಿಕೊಡುವುದಿಲ್ಲ. ಇದೇ ಸಮಾಜಕ್ಕೆ ನಾವು ಕೊಡುವ ದೊಡ್ಡ ಕೊಡುಗೆ ಎಂದರು.
ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುವುದರಿಂದ ಶಿಕ್ಷಣವೇ ಬಹಳ ಮುಖ್ಯ. ನೂರಕ್ಕೆ ಶೇ.75 ರಷ್ಟು ಜನ ಶಿಕ್ಷಣ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಅದನ್ನು ಮನಗಂಡ ಮಠವು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದಿದೆ ಎಂದು ಶ್ಲಾಘಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



