ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಕುಳಿತ ವ್ಯಕ್ತಿಯಿಂದ ಗನ್ ಪ್ರದರ್ಶನ: ಕೆಲಕಾಲ ಆತಂಕದ ವಾತಾವರಣ ಸೃಷ್ಟಿ
ಗನ್ ಕಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಬೆಂಗಳೂರು: ಕಾರಿನೊಳಗೆ ಕುಳಿತು ವ್ಯಕ್ತಿಯೊಬ್ಬ ಗನ್ ಪ್ರದರ್ಶಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆಯೊಂದು ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ತಾಳಕೆರೆ ಹ್ಯಾಂಡ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗನ್ ಕಂಡು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮತ್ತು ಸಾರ್ವಜನಿಕರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವೈರಲ್ ವಿಡಿಯೋದಲ್ಲಿ ವ್ಯಕ್ತಿ ಪ್ರದರ್ಶಿಸಿರುವ ಗನ್ ಅಸಲಿಯೋ ಅಥವಾ ನಕಲಿಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿಡಿಯೋ ಕುರಿತು ಸಾರ್ವಜನಿಕರಿಂದ ಆಕ್ರೋಶಗಳು ವ್ಯಕ್ತವಾಗಿವೆ.
ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದ್ದು, ಕಾರಿನ ಮಾಲೀಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



