ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲಾ: ರಾಘವೇಂದ್ರ ಸ್ವಾಮಿ ಫೋಟೊ ತಿರಸ್ಕರಿಸಿದ ಸಿಎಂ ವಿರುದ್ಧ ಜಗ್ಗೇಶ್ ಕಿಡಿ
ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ.

ಬೆಂಗಳೂರು: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ತಳ್ಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ರಾಯರ ಫೋಟೊ ತಿರಸ್ಕರಿಸಿದ್ದೂ ಚರ್ಚೆಗೆ ಗ್ರಾಸವಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯಗೆ ಹಿಂದೂ ದೇವರನ್ನು ಕಂಡರೆ ಆಗಿ ಬರಲ್ಲ. ತಿಲಕ, ನಾಮ ಹಾಗೂ ಕೃಷ್ಣನನ್ನು ಕಂಡರೇ ಆಗಿ ಬರುವುದಿಲ್ಲ. ಅವರಿಗೆ ಟೋಪಿ ಕಂಡರೆ ಮಾತ್ರ ಖುಷಿಯಾಗುತ್ತದೆ. ಟಿಪ್ಪು ಜಯಂತಿ ಮಾಡಿದರು, ಆಗ ಕೋಮು ಗಲಭೆಗಳು ಆದವು. ಕೋಗಿಲು ಲೇಔಟ್ನ ಮುಸ್ಲಿಮರಿಗೆ ಮನೆಗಳು ಕೊಡುವುದು ಇತ್ಯಾದಿ ಅದು ಅವರ ನಿರಂತರ ಪ್ರಕ್ರಿಯೆ ಎಂದು ಕಿಡಿಕಾರಿದರು.
ರಾಯರನ್ನ ಅಪಮಾನ ಮಾಡಿದ ಯಾರು ಉದ್ಧಾರ ಆದ ಇತಿಹಾಸವಿಲ್ಲಾ, ರಾಯರ ಸಣ್ಣ ಕೃಪೆ ನಮ್ಮಮೇಲೆ ಬೀಳಲಿ ಎಂದು ಕೋಟ್ಯಂತರ ಭಕ್ತವೃಂದ ಜಪತಪವೈರಾಗ್ಯ ಉಪವಾಸದಿಂದ ಸೇವೆಮಾಡುತ್ತಾರೆ, ಭಕ್ತಿಯಿಂದ ಬಂದದ್ದು ಹೀಗೆ ತಿರಸ್ಕರಿಸಿದ ಪ್ರಥಮ ವ್ಯಕ್ತಿಯನ್ನು ನಾನು ನನ್ನ ಬದುಕಲ್ಲಿ ಕಂಡದ್ದು. ರಾಯರಿದ್ದಾರೆ, ಎದ್ದುಬರುತ್ತಾರೆ ಕಾಯಬೇಕು ಎಂದು ರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ನಟ ಜಗ್ಗೇಶ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



