ಬೆಂಗಳೂರು: ಪ್ರಸಿದ್ಧ ಇಸ್ಕಾನ್ ದೇವಾಲಯದ 'ಸ್ಕೈವಾಕ್' ಬಳಿ ಬೆಂಕಿ, ತಪ್ಪಿದ ಅನಾಹುತ!
ಸ್ಕೈವಾಕ್ ನಲ್ಲಿ ಹಾಕಿದ್ದ ಜಾಹಿರಾತು ಬ್ಯಾನರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.

ಬೆಂಗಳೂರು: ಪ್ರಸಿದ್ಧ ಇಸ್ಕಾನ್ ದೇವಾಲಯದ ಸ್ಕೈವಾಕ್ ಬಳಿ ಕಳೆದ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಸ್ಕೈವಾಕ್ ನಲ್ಲಿ ಹಾಕಿದ್ದ ಜಾಹಿರಾತು ಬ್ಯಾನರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು.
ಆದರೆ ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ಘಟನೆ ಕುರಿತು ಹಲವು ಸುದ್ದಿ ಸಂಸ್ಥೆಗಳು ಮತ್ತು ಸೋಶಿಯಲ್ ಮೀಡಿಯಾ ಪೋಸ್ಟ್ ಗಳಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.
ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಆದರೆ, ಬ್ಯಾನರ್ ಗೆ ಅಳವಡಿಸಿದ ಲೈಟ್ ಗಳಿಂದ ಶಾರ್ಟ್ ಸರ್ಕಿಟ್ ಆಗಿದ್ದು, ಬೆಂಕಿ ಉಂಟಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



