ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ
ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ಅವರು ತಿಳಿಸಿದ್ದಾರೆ.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಬಿದರಿ ಅವರು ಹೇಳಿದ್ದಾರೆ.
ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆ ಅವರು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



