ಧಾರವಾಡ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು!
ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ನಿನ್ನೆ ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಕೊಲೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



