ರಾಜ್ಯ

GBA poll: ಗ್ರೇಟರ್ ಬೆಂಗಳೂರು ಚುನಾವಣೆ BJP ಉಸ್ತುವಾರಿಯಾಗಿ ರಾಮ್ ಮಾಧವ್ ನೇಮಕ

ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

GBA poll: ಗ್ರೇಟರ್ ಬೆಂಗಳೂರು ಚುನಾವಣೆ BJP ಉಸ್ತುವಾರಿಯಾಗಿ ರಾಮ್ ಮಾಧವ್ ನೇಮಕ
ರಾಮ್ ಮಾಧವ್
Published On :

ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆಗೆ ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ಬಿಜೆಪಿ ನೇಮಕ ಮಾಡಿದೆ.

ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದ್ದು, ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದ್ದು, ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯ ಕಣವಾಗಿ ನೋಡುತ್ತಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಬುಧವಾರ (ಜನವರಿ 20) ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಇದರ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿ ಹಾಗೂ ಸಹುಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ.

ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಗೊಂದಲಗಳು ಸೃಷ್ಟಿಯಾಗಿದ್ದವು. ನಂತರ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಸಭೆ ನಡೆಸಿ, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿವುದಾಗಿ ಘೋಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.