ಪ್ರಚೋದನಕಾರಿ ಭಾಷಣ ಆರೋಪ: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು
ದ್ವೇಷ ಭಾಷಣ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದರೂ, ಅದನ್ನು ಉಲ್ಲಂಘಿಸಿ, ಈಗ ಮತ್ತೆ ಪುನಃ ದ್ವೇಷ ಭಾಷಣ ಮಾಡುವುದರ ಮೂಲಕ ಸಮಾಜದಲ್ಲಿ ದ್ವೇಷ, ಮತ್ತು ಹಿಂಸೆಯನ್ನು ಪ್ರೇರೇಪಿಸುವ ಕೆಲಸವನ್ನು ಮಾಡಿದ್ದಾರೆ.

ಮಂಗಳೂರು: ಮಂಗಳೂರಿನ ಖಾಸಗಿ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ಜ.12ರಂದು ವಿವೇಕಾನಂದ ಕಾಲೇಜಿನ ಅವರಣದಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರು ಕಾಲೇಜಿನ ವಿದ್ಯಾರ್ಥಿಗಳು, ಪೋಷಕರು ಹಾಗೂ ಹದಿ ಹರೆಯದ ಬಾಲಕ ಬಾಲಕಿಯರು ಭಾಗವಹಿಸಿದ್ದ ಸಭೆಯಲ್ಲಿ ದ್ವೇಷ ಭಾಷಣ ಮಾಡಿದ್ದಾರೆಂದು ಪುತ್ತೂರು ನಿವಾಸಿ ರಾಮಚಂದ್ರ ಕೆ ಎಂಬುವವರು ದೂರು ನೀಡಿದ್ದಾರೆ.
ದ್ವೇಷ ಭಾಷಣದಲ್ಲಿ ಮುಸಲ್ಮಾನರ ಮತ್ತು ಕ್ರೈಸ್ತರ ಮೇಲೆ ಹಿಂಸೆ ಮಾಡಲು ಪ್ರಚೋದಿಸುತ್ತಾರೆ. ಇದು ಅಲ್ಲಿ ಸೇರಿರುವ ಸಭಾಸದರಿಗೆ, ಅದರಲ್ಲೂ ಮುಖ್ಯವಾಗಿ ಎಳೆಯ ಪ್ರಾಯದ ವಿದ್ಯಾರ್ಥಿಗಳಿಗೆ ಹಾಗೂ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಿಸಿದ ಸಾವಿರಾರು ಜನರಿಗೆ ಮುಸಲ್ಮಾನ ಮತ್ತು ಕ್ರೈಸ್ತ ಜನಾಂಗದ ಮೇಲೆ ದ್ವೇಷ ಹುಟ್ಟುವಂತೆ ದ್ವೇಷ ಭಾಷಣ ಮಾಡಿ, ಹಿಂಸೆಯನ್ನು ಪ್ರಚೋದಿಸಿರುತ್ತಾರೆ.
ದ್ವೇಷ ಭಾಷಣ ಮಾಡದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದರೂ, ಅದನ್ನು ಉಲ್ಲಂಘಿಸಿ, ಈಗ ಮತ್ತೆ ಪುನಃ ದ್ವೇಷ ಭಾಷಣ ಮಾಡುವುದರ ಮೂಲಕ ಸಮಾಜದಲ್ಲಿ ದ್ವೇಷ, ಮತ್ತು ಹಿಂಸೆಯನ್ನು ಪ್ರೇರೇಪಿಸುವ ಕೆಲಸವನ್ನು ಮಾಡಿದ್ದಾರೆ. ಹಾಗಾಗಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ದ್ವೇಷ ಭಾಷಣ ಮಾಡಿದ ಡಾ.ಕಲ್ಲಡ್ಕ ಪ್ರಭಾಕರ ಭಟ್‌ರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮತ್ತು ಈ ದ್ವೇಷ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನಲ್ ಮೇಲೆಯೂ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ದೂರು ಹಿನ್ನೆಲೆಯಲ್ಲಿ ದ್ವೇಷ ಭಾಷಣ ಮಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಈ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ಮತ್ತು ಕಾರ್ಯಕ್ರಮವನ್ನು ಆಯೋಜಕರ ಮೇಲೆ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



