'ಸಹೋದರಿಯರು ಸಿಟಿಯಲ್ಲಿ, ನಾನು ಮಾತ್ರ ಊರಲ್ಲಿ': ಹಳ್ಳಿಯಲ್ಲಿ ಇರುವುದಕ್ಕೆ ಬೇಸರ; ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಎರಡೇ ತಿಂಗಳಿಗೆ ಆತ್ಮಹತ್ಯೆ!
ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು.

ಕಲಬುರಗಿ: ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ.
ಅನಸೂಯಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು ತಿಂಗಳ ಹಿಂದಷ್ಟೇ ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿತ್ತು.
ಮದುವೆಯ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನಸೂಯಾ ಬೇಸರಗೊಂಡಿದ್ದಳು ಎನ್ನಲಾಗಿದ್ದು, ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಮದುವೆಯಾದ ನಂತರ ಅನುಸೂಯಾ ತನ್ನ ಗಂಡನೊಂದಿಗೆ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಳು. ಆದರೆ ಇದರಿಂದಾಗಿ ಆಕೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು ಎಂದು ಕುಟುಂಬದವರು ಹೇಳುತ್ತಾರೆ.
ಅನುಸೂಯಾಗೆ ಮೂವರು ಸಹೋದರಿಯರು ಇದ್ದು, ಅವರು ತಮ್ಮ ಗಂಡಂದಿರೊಂದಿಗೆ ಬೆಂಗಳೂರು ಹಾಗೂ ಮುಂಬೈ ಸೇರಿದಂತೆ ದೊಡ್ಡ ನಗರಗಳಲ್ಲಿ ನೆಲೆಸಿದ್ದರು. ಸಹೋದರಿಯರು ಮಹಾನಗರಗಳಲ್ಲಿ ಸುಖವಾಗಿ ಬದುಕುತ್ತಿರುವುದನ್ನು ನೆನೆಸಿಕೊಂಡು, ತಾನು ಮಾತ್ರ ಚಿಕ್ಕ ಪಟ್ಟಣದ ಹಳ್ಳಿಯಲ್ಲಿ ವಾಸವಾಗಿರುವುದರ ಬಗ್ಗೆ ಅನುಸೂಯಾ ಪದೇಪದೇ ಬೇಸರ ವ್ಯಕ್ತಪಡಿಸುತ್ತಿದ್ದಳು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



