ಉಡುಪಿ: ಬಸ್-ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು
ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಿಯಾರ್ ಬಳಿಯ ಕಾರ್ಕಳ ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಗುರುತು ಇನ್ನೂ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ರಭಸಕ್ಕೆ ಕ್ರೂಸರ್ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



