ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: 1 ಕೋಟಿ ರೂ ಗೆ ಡಿಮ್ಯಾಂಡ್ ಇಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ!
ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು.

ಬೆಂಗಳೂರು : ರಾಜ್ಯದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿಗೈದ ಆರೋಪದಲ್ಲಿ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 4.5 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪಿ ಒಂದು ಕೋಟಿ ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ.
ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದ ಸ್ಪೂರ್ತಿ ಎಂಬ ಯುವತಿ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಪರಿಚಯಿಸಿದ್ದಳು. ಚಾಟಿಂಗ್ ಮೂಲಕ ಪರಿಚಯವಾಗಿ ಬಳಿಕ ಯುವತಿ ಹಣಕ್ಕೆ ಬೇಡಿಕೆ ಇಟ್ಟದ್ದಳು. ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಳು.
ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದಿದ್ದು, ಮತ್ತೆ 1 ಕೋಟಿ ರೂ. ಕೊಡಬೇಕೆಂದು ಬೆದರಿಕೆ ಮುಂದುವರಿಸಿದ್ದಳು. ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈಗ ಬ್ಲ್ಯಾಕ್‌ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೊ, ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



