ಹುಬ್ಬಳ್ಳಿ: ಕಟೌಟ್ ಬಿದ್ದು ಮೂವರಿಗೆ ಗಾಯ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ; ಅಗತ್ಯ ನೆರವಿನ ಭರವಸೆ
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಟೌಟ್ ಬಿದ್ದು ಮೂವರು ಜನ ಗಾಯಗೊಂಡಿದ್ದು, ನಗರದ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಬ್ಬಳ್ಳಿ: ವಸತಿ ಇಲಾಖೆ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಆಯೋಜಿಸಿದ್ದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು ಮೂವರು ಗಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.
ಘಟನೆಯಲ್ಲಿ ಬ್ಯಾಹಟ್ಟಿಯ ಶಂಕರ ಹಡಪದ (28), ಹುಬ್ಬಳ್ಳಿಯ ಶಾಂತಾ ಕ್ಯಾರಕಟ್ಟಿ ( 60) ಮತ್ತು ಧಾರವಾಡದ ಲಕ್ಷ್ಮಿನಗರದ ಮಂಜುನಾಥ (33) ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಟೌಟ್ ಬಿದ್ದು ಮೂವರು ಜನ ಗಾಯಗೊಂಡಿದ್ದು, ನಗರದ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ರಹಿತರಿಗೆ ನೂತನ ಮನೆಗಳ ವಿತರಣೆ ಕಾರ್ಯಕ್ರಮದ ನಂತರ, ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಸರಕಾರದಿಂದಲೇ ಉಚಿತವಾಗಿ ಅಗತ್ಯವಾದ ಚಿಕಿತ್ಸೆ, ಔಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವಸತಿ ಸಚಿವ ಝಮೀರ ಅಹ್ಮದ್ ಖಾನ್, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಪರಿಷತ್ ಮುಖ್ಯ ಸಚೇಕರಾದ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂ.ಹೊನಕೇರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



