ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ; ಎರಡು ಮಕ್ಕಳ ತಾಯಿ ಸಲ್ಮಾಳನ್ನು ಕೊಂದು ಪ್ರಿಯತಮ ಆತ್ಮಹತ್ಯೆ!
ಅಕ್ರಮ ಸಂಬಂಧ ವಿಚಾರ ಬಹಿರಂಗವಾಗಿ ಗಲಾಟೆಯಾಗಿದ್ದರಿಂದ ವಿವಾಹಿತನೊಬ್ಬ ತಾನೂ ಸಂಬಂಧ ಹೊಂದಿದ್ದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧ ವಿಚಾರ ಬಹಿರಂಗವಾಗಿ ಗಲಾಟೆಯಾಗಿದ್ದರಿಂದ ವಿವಾಹಿತನೊಬ್ಬ ತಾನೂ ಸಂಬಂಧ ಹೊಂದಿದ್ದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಆಂಧ್ರ ಮೂಲದ ಬಾಬಾಜಾನ್ ಮದುವೆಯಾಗಿ ಇಬ್ಬರು ಮಕ್ಕಳಿದ್ದು ಚಿಂತಾಮಣಿಯಲ್ಲಿ ಪತ್ನಿಯೊಂದಿಗೆ ನೆಲೆಸಿದ್ದನು. ಬಾಬಾಜಾನ್ ಗೆ ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ಗರಿಗಿರೆಡ್ಡಿಪಾಳ್ಯಾ ನಿವಾಸಿ, ಇಬ್ಬರು ಮಕ್ಕಳ ತಾಯಿ ಸಲ್ಮಾ ಜೊತೆ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರ ತಿಳಿದು ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆಯೂ ನಡೆದಿತ್ತು. ಸಲ್ಮಾಳ ಮನೆಗೆ ಬಂದ ಬಾಬಾಜಾನ್ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ನಂತರ ಮನೆಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಚೇಳೂರು ಠಾಣೆ ಪೊಲೀಸರು ಘಟನಾ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ ರಾಜೀವ್ ಗೌಡ ಬಂಧಿಸಿದ ಪೊಲೀಸರು!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


