ರಾಜ್ಯ

DG-IGP ಎಂ.ಎ ಸಲೀಂ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಣೆ ಮೂಲಕ ಇಲ್ಲಿಗೆ ಕರೆತಂದು ಆಶ್ರಯ ನೀಡಲಾಗುತ್ತಿದೆ. ಇದು ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಸೇರಿದ 'ಬೇನಾಮಿ' ಆಸ್ತಿಯಾಗಿದೆ ಎಂದು ಆರೋಪಿಸಿದ್ದರು.

DG-IGP ಎಂ.ಎ ಸಲೀಂ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು
ಪುನೀತ್ ಕೆರೆಹಳ್ಳಿ
Published On :

ಬೆಂಗಳೂರು: ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಎಂ.ಎ. ಸಲೀಂ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಗೋರಕ್ಷಕ ಮತ್ತು ಹಿಂದುತ್ವ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ಸಹಚರರ ವಿರುದ್ಧ ಸೈಬರ್ ಅಪರಾಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿರುವ ಮೂರನೇ ಎಫ್‌ಐಆರ್ ಇದಾಗಿದೆ.

ಜನವರಿ 23 ರಂದು ಎಫ್‌ಐಆರ್ ದಾಖಲಾಗಿದ್ದು, ಎಫ್ಐಆರ್ ನಲ್ಲಿ ಪುನೀತ್ ಕೆರೆಹಳ್ಳಿ ಅವರು ನಾಲ್ಕರಿಂದ ಐದು ಸಹಚರರೊಂದಿಗೆ ಜನವರಿ 22 ರಂದು ಸಕಿನಾ ತಸ್ಲೀಂ ಅವರಿಗೆ ಸೇರಿದ ಸೋಲದೇವನಹಳ್ಳಿ ಬಳಿಯ ಕೆಂಪಾಪುರ ಶ್ವೇತಾ ಫಾರ್ಮ್ ರಸ್ತೆಯಲ್ಲಿರುವ ಪ್ರದೇಶವೊಂದಕ್ಕೆ ಹೋಗಿದ್ದು, ಅಲ್ಲಿ ಲೈವ್ ವೀಡಿಯೋ ಮಾಡಿದ್ದಾರೆ.

ವಿಡಿಯೋದಲ್ಲಿ ಅಲ್ಲಿದ್ದ ಜನರನ್ನು ಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಣೆ ಮೂಲಕ ಇಲ್ಲಿಗೆ ಕರೆತಂದು ಆಶ್ರಯ ನೀಡಲಾಗುತ್ತಿದೆ. ಇದು ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಸೇರಿದ 'ಬೇನಾಮಿ' ಆಸ್ತಿಯಾಗಿದೆ. ಬಾಂಗ್ಲಾದೇಶಿ ಮುಸ್ಲಿಮರು ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆಂದು ಆರೋಪಿಸಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 196 (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ ಅಥವಾ ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353 (ಸಾರ್ವಜನಿಕ ದುಷ್ಕೃತ್ಯಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.