77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧ
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲೂ 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣೆಕ್ಷಾ ಪರೇಡ್ ಮೈದಾನವು ಸಂಪೂರ್ಣವಾಗಿ ಸಿದ್ಧಗೊಂಡಿದ್ದು, ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲೂ 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಒದಗಿಸಲಾಗಿದೆ.
ಗಣ್ಯರ ಓಡಾಟ ಹೆಚ್ಚಿರುವ ಕಾರಣದಿಂದಾಗಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಗ್ಗೆ 8.30ರಿಂದ 10-30ರವರೆಗೆ ಕಬ್ಬನ್ ರಸ್ತೆಯ ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗಿನ ಎರಡೂ ದಿಕ್ಕುಗಳಲ್ಲೂ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್‌ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



