ರಾಜ್ಯದಲ್ಲಿ ಮತ್ತೊಂದು ದರೋಡೆ: ಬೆಂಗಳೂರಿನಲ್ಲಿ ಗನ್ ತೋರಿಸಿ ಚಿನ್ನಾಭರಣ ಲೂಟಿ, Video!
ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಬೆಂಗಳೂರಿನ ದಾಸನಪುರದಲ್ಲಿ ಚಿನ್ನದಂಗಡಿಗೆ ನುಗ್ಗಿದ ಖದೀಮರು ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಬೆಂಗಳೂರಿನ ದಾಸನಪುರದಲ್ಲಿ ಚಿನ್ನದಂಗಡಿಗೆ ನುಗ್ಗಿದ ಖದೀಮರು ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದರೋಡೆಕೋರರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ದಾಸನಪುರದಲ್ಲಿ ರಾಮದೇವ್ ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಚಿನ್ನಾಭರಣ ದೋಚಿದ್ದಾರೆ. ಜ್ಯುವೆಲ್ಲರಿ ಮಾಲೀಕ ಕನ್ನಯ್ಯಲಾಲ್ ಅಂಗಡಿ ಕ್ಲೋಸ್ ಮಾಡಲು ಮುಂದಾದ ವೇಳೆ ಗನ್ ಹಿಡಿದು ಅಂಗಡಿಗೆ ನುಗ್ಗಿದ್ದರು. ಗನ್ ಹಿಡಿದು ಹೆದರಿಸಿ ಟೇಬಲ್ ಮೇಲಿದ್ದ ಚಿನ್ನವನ್ನು ದೋಚಿದ್ದಾರೆ. ಖದೀಮರು ದರೋಡೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



