ಪಕ್ಷದ ಕಚೇರಿ ನಿರ್ಮಾಣದಲ್ಲಿ ಆಸಕ್ತಿ ತೋರದವರ ಬಗ್ಗೆ 2 ದಿನಗಳಲ್ಲಿ AICC ಗೆ ಲಿಖಿತ ಮಾಹಿತಿ: ಡಿ.ಕೆ ಶಿವಕುಮಾರ್
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಭವನ್ ಟ್ರಸ್ಟ್ ಸಮಿತಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಬೆಂಗಳೂರು: ಪಕ್ಷದ ಕಚೇರಿ ನಿರ್ಮಾಣ ವಿಚಾರದಲ್ಲಿ ಆಸಕ್ತಿ ತೋರಿರುವ ಹಾಗೂ ತೋರದವರ ಬಗ್ಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡುವಂತೆ ಎಐಸಿಸಿ ನಾಯಕರು ಕೇಳಿದ್ದು, ಎರಡು ದಿನಗಳಲ್ಲಿ ಮಾಹಿತಿ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಭವನ್ ಟ್ರಸ್ಟ್ ಸಮಿತಿ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ನಮ್ಮ ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಭವನದ ಟ್ರಸ್ಟಿಗಳಾಗಿದ್ದು, ಎಐಸಿಸಿ ಖಜಾಂಜಿಗಳು ಈ ಸಭೆಗೆ ಬಂದಿದ್ದರು. ಯಾವ ತಾಲ್ಲೂಕಿನಲ್ಲಿ ಆಗಿದೆ, ಯಾವ ತಾಲ್ಲೂಕಿನಲ್ಲಿ ಆಗಿಲ್ಲ, ಯಾರು ಇದರಲ್ಲಿ ಆಸಕ್ತಿ ವಹಿಸಿದ್ದಾರೆ, ಯಾರು ಆಸಕ್ತಿ ವಹಿಸಿಲ್ಲ ಎಲ್ಲವನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ಕಟ್ಟಡ ಕಟ್ಟಲಾಗಿದೆ, ಎಲ್ಲಿ ಕಟ್ಟಿಲ್ಲ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿರುವ ಪಕ್ಷದ ಆಸ್ತಿಗಳು, ದಾಖಲೆಗಳು, ತೆರಿಗೆ ಪಾವತಿ ಸೇರಿದಂತೆ ಅನೇಕ ಅಂಶಗಳ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ನೂತನ ಕಚೇರಿ ನಿರ್ಮಾಣ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಪಡೆದರು. ಗಾಂಧಿ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಸಿದ್ಧವಾಗಿದೆ” ಎಂದು ಉತ್ತರಿಸಿದರು.
ಅಬಕಾರಿ ಇಲಾಖೆಯಲ್ಲಿ ಕಳೆದ 2 ವರ್ಷದಲ್ಲಿ 6 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ಸಚಿವ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ಕೇಳಿದಾಗ, “ಇದೆಲ್ಲವೂ ಸುಳ್ಳು ಆರೋಪ. ಅವರ ಆರೋಪಗಳು ರಾಜಕೀಯ ಪ್ರೇರಿತ. ಸಚಿವರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ” ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



