ರಾಜ್ಯ

ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ರೂ ಏನ್ ಮಾಡ್ತಿದ್ದೀರಾ? ಎಲ್ಲಾ ಖಾಲಿ ಸರ್ಕಾರಿ ಆಸ್ತಿಗಳಿಗೆ ಬೇಲಿ ಹಾಕಿ: ಕೃಷ್ಣ ಬೈರೇಗೌಡ ಸೂಚನೆ

ಖಾಲಿ ಜಾಗ, ಸರ್ಕಾರಿ ಜಮೀನಿಗೆ ಬೇಲಿ ಇಲ್ಲವೇ ರಕ್ಷಣಾ ಗೋಡೆ ಹಾಕಲೇಬೇಕು. ನಕಾಶೆ ರಸ್ತೆ ಎಷ್ಟು ಒತ್ತುವರಿ ಆಗಿದೆ ಎಂಬ ಕುರಿತು ಮೊದಲು ಮಾಹಿತಿ ಸಂಗ್ರಹಿಸಬೇಕು. ಮತ್ತೆ ಒತ್ತುವರಿ ಆದರೆ ತಹಶೀಲ್ದಾರ್ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.

ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ರೂ ಏನ್ ಮಾಡ್ತಿದ್ದೀರಾ? ಎಲ್ಲಾ ಖಾಲಿ ಸರ್ಕಾರಿ ಆಸ್ತಿಗಳಿಗೆ ಬೇಲಿ ಹಾಕಿ: ಕೃಷ್ಣ ಬೈರೇಗೌಡ ಸೂಚನೆ
ಕೃಷ್ಣ ಭೈರೇಗೌಡ
Published On :

ಬೆಂಗಳೂರು: ನಗರದಲ್ಲಿ ಖಾಲಿ ಇರುವ ಎಲ್ಲಾ ಸರ್ಕಾರಿ ಜಾಗಗಳಿಗೂ ಬೇಲಿ ಅಥವಾ ರಕ್ಷಣಾ ಗೋಡೆ ಹಾಕಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ನಗರ ವ್ಯಾಪ್ತಿಯ ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಸಂಬಂಧಿಸಿ ಮಂಗಳವಾರ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಜತೆ ಸಭೆ ನಡೆಸಿದರು.

ಅನುಮತಿ ನೀಡಿದ ಪ್ರದೇಶಕ್ಕೂ ಮೀರಿ ಅನಧಿಕೃತ ಬಡಾವಣೆ ಮಾಡಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು. ಅಕ್ರಮ ಲೇಔಟ್ ನಿರ್ಮಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಸೂಚನೆ ನೀಡಿದ ನಂತರವೂ ಗೋಮಾಳಗಳಲ್ಲಿ ಬಡಾವಣೆ ಮಾಡಿದವರ ವಿರುದ್ಧ ಏಕೆ ಕ್ರಮ ಜರುಗಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಈವರೆಗೂ ನಗರ ಹಾಗೂ ಸುತ್ತಮುತ್ತ ಅಕ್ರಮ ಬಡಾವಣೆಗಳಲ್ಲಿ ನಿರ್ಮಿಸಿರುವ ಎಷ್ಟು ಮನೆಗಳನ್ನು ನೆಲಸಮ ಮಾಡಿ ಪ್ರಕರಣಗಳನ್ನು ದಾಖಲಿಸಿದ್ದೀರಿ, ನಕಲಿ ದಾಖಲೆ ಸೃಷ್ಟಿಸುವವರು ತಮ್ಮ ಕೆಲಸ ಮುಂದುವರಿಸಿದ್ಧಾರೆ. ಕಾನೂನು ಉಲ್ಲಂಘಿಸಿ ಬಡಾವಣೆ ಮಾಡುವವರಿಗೆ ಕರುಣೆ ತೋರಿಸುವ ಅಗತ್ಯ ಇಲ್ಲ ಎಂದರು.

ಖಾಲಿ ಜಾಗ, ಸರ್ಕಾರಿ ಜಮೀನಿಗೆ ಬೇಲಿ ಇಲ್ಲವೇ ರಕ್ಷಣಾ ಗೋಡೆ ಹಾಕಲೇಬೇಕು. ನಕಾಶೆ ರಸ್ತೆ ಎಷ್ಟು ಒತ್ತುವರಿ ಆಗಿದೆ ಎಂಬ ಕುರಿತು ಮೊದಲು ಮಾಹಿತಿ ಸಂಗ್ರಹಿಸಬೇಕು. ಮತ್ತೆ ಒತ್ತುವರಿ ಆದರೆ ತಹಶೀಲ್ದಾರ್ ಅವರೇ ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು. ಲ್ಯಾಂಡ್ ಬೀಟ್‌ ಆ್ಯಪ್‌ನಲ್ಲಿ ಶೇ 97 ರಷ್ಟು ಸರ್ಕಾರಿ ಭೂಮಿಯನ್ನು ಗುರುತಿಸಿ ಡೇಟಾ ಎಂಟ್ರಿ ಮಾಡಲಾಗಿದೆ. ಈ ಮಾಹಿತಿ ಉಪಯೋಗಿಸಿಕೊಂಡು ನೈಜಸ್ಥಿತಿಯನ್ನು ದಿಶಾ ಆ್ಯಪ್‌ನಲ್ಲಿ ಅಪ್ಡೇಟ್ ಮಾಡಬೇಕು‌ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.