ಒಟ್ಟಾರೆ 320 ಕೋಟಿ ಆಸ್ತಿ ಮುಟ್ಟುಗೋಲು: ಕರ್ನಾಟಕ Congress ಶಾಸಕ, ಸಹಚರರು ಅಕ್ರಮ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್'; ED
ಕರ್ನಾಟಕ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರು ರಾಷ್ಟ್ರವ್ಯಾಪ್ತಿಯ 'ಅಕ್ರಮ' ಆನ್‌ಲೈನ್ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್' ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ್ದು ಹಣ ವರ್ಗಾವಣೆ ತನಿಖೆಯ ಭಾಗವಾಗಿ 177 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಬೆಂಗಳೂರು/ನವದೆಹಲಿ: ಕರ್ನಾಟಕ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಮತ್ತು ಅವರ ಸಹಚರರು ರಾಷ್ಟ್ರವ್ಯಾಪ್ತಿಯ 'ಅಕ್ರಮ' ಆನ್‌ಲೈನ್ ಬೆಟ್ಟಿಂಗ್ ಜಾಲದ 'ಮಾಸ್ಟರ್ ಮೈಂಡ್' ಎಂದು ಜಾರಿ ನಿರ್ದೇಶನಾಲಯ (ED) ಹೇಳಿದ್ದು ಹಣ ವರ್ಗಾವಣೆ ತನಿಖೆಯ ಭಾಗವಾಗಿ 177 ಕೋಟಿ ರೂ. ಮೌಲ್ಯದ ಹೊಸ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳ ಒಟ್ಟು ಮೌಲ್ಯ 320 ಕೋಟಿ ರೂ.ಗಳಿಗೆ ತಲುಪಿದೆ.
ಹಣ ವರ್ಗಾವಣೆ ತಡೆ ಕಾಯ್ದೆ (PMAL) ಅಡಿ ಕೆಲವು ಚರ ಆಸ್ತಿಗಳೊಂದಿಗೆ ಕೃಷಿ ಮತ್ತು ವಸತಿ ಪ್ಲಾಟ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕೇಂದ್ರ ತನಿಖಾ ಸಂಸ್ಥೆ ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ ಎಂದು ED ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಈ ಆಸ್ತಿಗಳು ಯಾರಿಗೆ ಸೇರಿವೆ ಎಂಬುದನ್ನು ಅದು ನಿರ್ದಿಷ್ಟಪಡಿಸಿಲ್ಲ.
ಕರ್ನಾಟಕದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 51 ವರ್ಷದ ಶಾಸಕ ವೀರೇಂದ್ರ ಪಪ್ಪಿಯನ್ನು 2025ರ ಆಗಸ್ಟ್ ನಲ್ಲಿ ಸಿಕ್ಕಿಂನಲ್ಲಿ ಇಡಿ ಬಂಧಿಸಿತ್ತು. ಅಲ್ಲಿ ಅವರು ಕ್ಯಾಸಿನೊವನ್ನು ಗುತ್ತಿಗೆ ಪಡೆಯಲು ವ್ಯಾಪಾರ ಪ್ರವಾಸಕ್ಕೆ ಹೋಗಿದ್ದರು. ಸದ್ಯ ಪಪ್ಪಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ಇಡಿ ಪಪ್ಪಿಯನ್ನು ಪ್ರಕರಣದಲ್ಲಿ 'ಪ್ರಮುಖ ಆರೋಪಿ' ಎಂದು ಕರೆದಿತ್ತು.
ಕೆಸಿ ವೀರೇಂದ್ರ ಮತ್ತು ಅವರ ಸಹಚರರು ರಾಷ್ಟ್ರವ್ಯಾಪಿ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಜಾಲದ ಹಿಂದಿನ ಮಾಸ್ಟರ್‌ಮೈಂಡ್‌ಗಳು ಎಂಬುವದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಇಡಿ ಆರೋಪಿಸಿದೆ. ಕೇಂದ್ರ ಸರ್ಕಾರವು ಕಳೆದ ವರ್ಷ ಭಾರತದಲ್ಲಿ ಆನ್‌ಲೈನ್ ರಿಯಲ್-ಮನಿ ಗೇಮಿಂಗ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



