ರಾಜ್ಯ

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ

ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದಾರೆ.

ಬೆಂಗಳೂರು: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ
ಸಿಜೆ ರಾಯ್
Published On :

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇರಳ ಮೂಲದ, 57 ವರ್ಷದ ಸಿಜೆ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.

ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ತಮ್ಮ ಕುಟುಂಬದ ಮೇಲೆ ಪದೇ ಪದೆ ಆದಾಯ ತೆರಿಗೆ ಇಲಾಖೆ ನಡೆಸುತ್ತಿದ್ದ ದಾಳಿಗೆ ಹೆದರಿ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸಹ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.

ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್‌ನ SBS ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.