ರಾಜ್ಯದ ಎಲ್ಲಾ ಬಸ್ ನಿಲ್ದಾಣ ಹಾಗೂ ಬಸ್ಗಳ ಮೇಲೆ ತಂಬಾಕು ಜಾಹೀರಾತು ನಿಷೇಧ
ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರು: ಸಾರ್ವಜನಿಕರಿಂದ ತೀವ್ರ ಟೀಕೆಯ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಮತ್ತು ಬಸ್ ಗಳ ಮೇಲೆ ತಂಬಾಕು ಉತ್ಪನ್ನಗಳ ಸೇವನೆ ಉತ್ತೇಜಿಸುವ ಎಲ್ಲಾ ನೇರ ಮತ್ತು ಪರೋಕ್ಷ ಜಾಹೀರಾತುಗಳನ್ನು ನಿಷೇಧಿಸಿದೆ.
ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಡಬ್ಲ್ಯೂಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಕೆಕೆಆರ್‌ಟಿಸಿ)ದ ವ್ಯವಸ್ಥಾಪಕ ನಿರ್ದೇಶಕರಿಗೆ ನೀಡಿದ ಟಿಪ್ಪಣಿಯಲ್ಲಿ, ತಮ್ಮ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ತರಬೇಕು ಎಂದು ಆದೇಶಿಸಿದ್ದಾರೆ.
"ಸಾರ್ವಜನಿಕರ ಹಿತದೃಷ್ಟಿಯಿಂದ, ತಂಬಾಕು ಉತ್ಪನ್ನಗಳ ಸೇವನೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಉತ್ತೇಜಿಸುವ ಯಾವುದೇ ಜಾಹೀರಾತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಸ್ಸುಗಳಲ್ಲಿ ಅಥವಾ ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಬಾರದು ಎಂದು ನಾನು ಈ ಮೂಲಕ ನಿರ್ದೇಶಿಸುತ್ತೇನೆ" ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಅಂತಹ ಜಾಹೀರಾತುಗಳನ್ನು ಈಗಾಗಲೇ ಬಸ್ಸುಗಳಲ್ಲಿ ಅಥವಾ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಿದ್ದರೆ, ಅವುಗಳನ್ನು ತೆಗೆದುಹಾಕಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



